ಕನ್ನಡಪ್ರಭ ವಾರ್ತೆ ಸುರಪುರ
ರಾಯಚೂರ ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಮತಕ್ಷೇತ್ರದ ಉಪಚುನಾಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಿ. ಕುಮಾರನಾಯಕ ಮತ್ತು ರಾಜಾ ವೇಣುಗೋಪಾಲ ನಾಯಕರ ಪರವಾಗಿ ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ರೋಡ್ ಶೋ ಬಳಿಕ ಮಂಜಲಾಪುರ ಗ್ರಾಮದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಸರಕಾರದ ಅವಧಿಯಲ್ಲಿ ಜನಸಾಮಾನ್ಯರು ಬದುಕುವುದು ಕಷ್ಟವಾಗಿದೆ. ಕೇಂದ್ರದ ಬಿಜೆಪಿ ಸರಕಾರ ಪೆಟ್ರೋಲ್, ಡಿಸೇಲ್, ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿದ ಪರಿಣಾಮ ಬಡವರು ಕಷ್ಟದಲ್ಲಿ ಬದುಕು ಸಾಗಿಸುವಂತಾಗಿದೆ ಎಂದರು.
ಕಾಂಗ್ರೆಸ್ ಸರಕಾರ ಶ್ರೀಮಂತರ ಮೇಲೆ ಹೆಚ್ಚಿನ ತೆರಿಗೆ ವಿಧಿಸಿ ಅದರಿಂದ ಬಂದ ತೆರಿಗೆಯನ್ನು ಬಡವರಿಗೆ ಹಂಚುತ್ತಿತ್ತು. ಆದರೆ, ಮೋದಿ ಸರಕಾರ ಬಡವರ ತಿನ್ನುವ ವಸ್ತುಗಳ ಮೇಲೆ ಬೆಲೆಯೇರಿಕೆ ಮಾಡಿ ಶ್ರೀಮಂತರಿಗೆ ತೆರಿಗೆ ಕನಿಷ್ಠ ಮಟ್ಟಕ್ಕೆ ಇಳಿಸಿ ಉಳ್ಳವರಿಗೆ ಅನುಕೂಲ ಮಾಡಿಕೊಟ್ಟಿದೆ. ಬಡವರ ದುಡ್ಡನ್ನು ಕಿತ್ತುಕೊಂಡು ಶ್ರೀಮಂತರಿಗೆ ನೀಡಿದೆ. ಬಡವರ ವಿರೋಧವಾಗಿರುವ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಎಂದರು.ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದಂತೆ ,ಕೇಂದ್ರದಲ್ಲಿಯೂ ಸಹಿತ ಮಹಾಲಕ್ಷ್ಮಿ ಯೋಜನೆ ಅನುಷ್ಠಾನಗೊಳಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತಗೊಳಿಸಲಾಗುತ್ತದೆ. ದುಡಿಯುವ ಕೈಗಳಿಗೆ ಉದ್ಯೋಗ, ರೈತರ ಸಾಲಮನ್ನಾ ಸೇರಿದಂತೆ ಸೇರಿದಂತೆ ಹಲವಾರು ಯೋಜನೆಗಳನ್ನು ಘೋಷಿಸಿದೆ. ಜನರ ಪರವಾಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಮತಚಲಾಯಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಇದ್ದರು.
ಪ್ರಪಂಚದಲ್ಲೇ ಅತ್ಯಂತ ದೊಡ್ಡ ಲೈಂಗಿಕ ದೌರ್ಜನ್ಯದ ಪ್ರಕರಣ:
ಈ ಹಿಂದೆ ಅವರದೇ ಪಕ್ಷದ ದೇವರಾಜೇಗೌಡ ಅವರು ಗೃಹ ಸಚಿವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಬಾರದು, ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಬೇಡವೇ ಬೇಡ ಅಂತ ಪತ್ರ ಬರೆದಿದ್ದರು. ಬಿಜೆಪಿ ಅದಕ್ಕೆ ಸೊಪ್ಪೇ ಹಾಕಲಿಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಒಬ್ಬ ವಿಕೃತ ಕಾಮಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶ ಬಿಟ್ಟು ಓಡಿ ಹೋಗಿರುವ ಪ್ರಜ್ವಲ ರೇವಣ್ಣರನ್ನು ವಾಪಸ್ ಕರೆ ತರುವ ಕೆಲಸ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಇದರಲ್ಲಿ ದಿಟ್ಟತನ ಮೆರೆಯಲಿ. ಇಂತ ವಿಚಾರದಲ್ಲಿ ಯಾವುದೇ ರಾಜಕೀಯ ಷಡ್ಯಂತ್ರ ಇಲ್ಲ. ನೂರಾರು ಮಹಿಳೆಯರು ಇದರಲ್ಲಿ ಸಂತ್ರಸ್ಥೆಯರಾಗಿದ್ದಾರೆ. ನೂರಾರು ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದ ಹೊರಗೆ ಬಂದಿರುವುದರಿಂದ ಇದನ್ನು ಮಹಿಳಾ ಆಯೋಗ ಗಂಭೀರ ತೆಗೆದುಕೊಂಡಿದೆ ಎಂದು ತಿಳಿಸಿದರು.