ಕನ್ನಡಪ್ರಭ ವಾರ್ತೆ ಭದ್ರಾವತಿ
ಈ ಸಂಬಂಧ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ. ರೈತರ, ದೀನದಲಿತರ ಪೂರಕ ಚರ್ಚೆ ಆಗಬೇಕೆ ಹೊರತು ಭ್ರಷ್ಟ ರಾಜಕಾರಣಿಗಳ ಕಚ್ಚಾಟದಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿವೇಶನ ವೇಳೆ ಕ್ಷುಲ್ಲಕ ಕಾರಣಕ್ಕೆ ಅಧಿವೇಶನದ ಸಮಯ ವ್ಯರ್ಥ ಮಾಡಿ ಸದನಗಳು ನಡೆಯದಂತೆ ಮಾಡಿದರೆ ಅಂತಹ ರಾಜಕಾರಣಿಗಳನ್ನು ನೇರ ಹೊಣೆಗಾರರನ್ನಾಗಿಸಿ, ಅಧಿವೇಶನ ನಡೆಯಲು ತಗಲುವ ಖರ್ಚು ವೆಚ್ಚ ಅವರೇ ಭರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. -----
ಡಿ೨೪-ಬಿಡಿವಿಟಿರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ಎಲ್ಲಾ ರಾಜ್ಯಗಳ ವಿಧಾನಸಭೆ, ವಿಧಾನ ಪರಿಷತ್ ಅಧಿವೇಶನ ವೇಳೆ ಸಂಸದರು, ಶಾಸಕರು ಗೌರವಯುತವಾಗಿ ನಡೆದುಕೊಳ್ಳುವಂತೆ ಸೂಚಿಸುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಹಸೀಲ್ದಾರ್ ಮೂಲಕ ಮನವಿ ಮಾಡಿದ್ದಾರೆ.