ಡೆಂಘೀ ಕುರಿತು ಆತಂಕ ಬೇಡ: ಸಿಇಒ ಭಂವರ್‌ ಸಿಂಗ್‌

KannadaprabhaNewsNetwork |  
Published : Jul 13, 2024, 01:37 AM IST
ಕಲಬುರಗಿಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿ ಹರಡುತ್ತಿರುವ ಕಾರಣ ನಿಯಂತ್ರಣ ನಿಟ್ಟಿನಲ್ಲಿ ಫಾಗಿಂಗ್‌ ಮಾಡುತ್ತಿರುವುದು. | Kannada Prabha

ಸಾರಾಂಶ

ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಘೀ ಜ್ವರದಿಂದ ಸಂರಕ್ಷಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಭಂವರ್‌ ಸಿಂಗ್‌ ಮೀನಾ ಹೇಳಿದರು.

ಕಲಬುರಗಿ:

ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಘೀ ಜ್ವರದಿಂದ ಸಂರಕ್ಷಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಭಂವರ್‌ ಸಿಂಗ್‌ ಮೀನಾ ಹೇಲಿದರು.

ನಗರದಲ್ಲಿ ಸೊಳ್ಳೆಗಳ ತಾಣ ನಿರ್ಮೂಲನಾ ಅರಿವು ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಚಾಲನೆ ನೀಡಿ ಮಾತನಾಡಿದ ಅವರು, ಡೆಂಘೀ ಜ್ವರವು ಈಡಿಸ್ ಎಂಬ ಜಾತಿಯ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದೆ. ಈ ಹಿನ್ನೆಲೆ ಡೆಂಘೀ ನಿಯಂತ್ರಣಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆವಾಗಿಟ್ಟುಕೊಳ್ಳುವುದು ಬಹುಮುಖ್ಯವಾಗಿದೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್‌ಗಳು, ಡ್ರಮ್‌ಗಳು, ಹೂವಿನ ಕುಂಡ ಮುಂತಾದವುಗಳಲ್ಲದೆ ಮನೆ ಸುತ್ತ ಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟೈರ್‌ಗಳು, ಎಳನೀರಿನ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಹೀಗಾಗಿ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು ಎಂದು ಭಂವರ್ ಸಿಂಗ್ ಮೀನಾ ತಿಳಿಸಿದರು.

ಇದೆ ವೇಳೆಸೊಳ್ಳೆಗಳ ತಿನ್ನುವ ಗಪ್ಪಿ ಮೀನುಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಮತ್ತು ಡಿಎಚ್‌ಒ ಡಾ.ರತಿಕಾಂತ ಸ್ವಾಮಿ ಅವರ ಸಮಕ್ಷಮ ಆರೋಗ್ಯ ಸಿಬ್ಬಂದಿ ನೀರಿನ ಪ್ರದೇಶಕ್ಕೆ ಬಿಟ್ಟರು. ಇದೇ‌ ಸಂದರ್ಭದಲ್ಲಿ ಗ್ರಾಮದಲ್ಲಿ ಫಾಗಿಂಗ್ ಸಹ ಮಾಡಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಸಂತೋಷ, ತಾಲೂಕು ಪಂಚಾಯಿತಿ ಇಒ ಮಲ್ಲಿನಾಥ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಒ, ಆಶಾ ಕಾರ್ಯಕರ್ತೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತೂಟ್ ಫಿನ್‌ಕಾರ್ಪ್‌ನ ವಡಗಾಂವ ಶಾಖೆಯಲ್ಲಿ ಮಹಿಳಾ ದಿನಾಚರಣೆ
‘ಥ್ಯಾಂಕ್ಸ್‌ ಅಪ್ಪ’ ಕಾದಂಬರಿ ಪ್ರತಿ ಮನೆಯಲ್ಲೂ ಇರಲಿ: ನ್ಯಾ.ಸಂತೋಷ್‌