ಸೋಲು, ಗೆಲವು ಚಿಂತೆ ಬಿಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ

KannadaprabhaNewsNetwork |  
Published : Dec 18, 2023, 02:00 AM IST
ಚಿತ್ರ: ಡಿ೧೬-ಬಿಡಿವಿಟಿ೧(ಎ)ಶಿವಮೊಗ್ಗ ಜಿಲ್ಲಾ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಶನಿವಾರ ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಾಗೂ ರಾಜ್ಯಮಟ್ಟದ ಎಲ್ಲಾ ವಿಭಾಗದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಉದ್ಘಾಟಿಸಿದರು. | Kannada Prabha

ಸಾರಾಂಶ

new town, sir m v collage, ಶಿವಮೊಗ್ಗ ಜಿಲ್ಲಾ ಪವರ್‌ ಲಿಫ್ಟಿಂಗ್ ಅಸೋಸಿಯೇಷನ್, Open Power Lifting compitation, Bhadravati news,

ಕನ್ನಡಪ್ರಭ ವಾರ್ತೆ, ಭದ್ರಾವತಿ

ಕ್ರೀಡಾಕೂಟಗಳಲ್ಲಿ ಯುವಜನತೆ ಪಾಲ್ಗೊಳ್ಳುವಿಕೆ ಮುಖ್ಯ. ಸ್ಪರ್ಧೆಯಲ್ಲಿ ಭಾಗವಹಿಸುವ ಮೊದಲೇ ಗೆಲುವು- ಸೋಲಿನ ಬಗ್ಗೆ ಚಿಂತಿಸಬಾರದು ಎಂದು ಅಂತರ ರಾಷ್ಟ್ರೀಯ ಪವರ್ ಲಿಫ್ಟರ್ ಮಹೇಶ್ವರಯ್ಯ ಹೇಳಿದರು.

ಶಿವಮೊಗ್ಗ ಜಿಲ್ಲಾ ಪವರ್‌ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಶನಿವಾರ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಾಗೂ ರಾಜ್ಯಮಟ್ಟದ ಎಲ್ಲ ವಿಭಾಗದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ, ಅಂತರ ರಾಷ್ಟ್ರೀಯ ಪವರ್ ಲಿಫ್ಟರ್ ಪ್ರಕಾಶ್ ಕಾರಂತ್ ಮಾತನಾಡಿ, 80ರ ದಶಕದಲ್ಲಿ ವಿಐಎಸ್‌ಎಲ್ ಕಾರ್ಖಾನೆ ಕ್ರೀಡಾಪಟುಗಳಿಗೆ ನೀಡಿದ ಪ್ರೋತ್ಸಾಹ ಇಂದು ದಂತಕಥೆ. ಅನೇಕ ಕ್ರೀಡಾಪಟುಗಳ ಬೆಳವಣಿಗೆಯಲ್ಲಿ ವಿಐಎಸ್‌ಎಲ್ ಕೊಡುಗೆ ಮಹತ್ವದ್ದಾಗಿದೆ ಎಂದು ಕಾರ್ಖಾನೆ ಸಹಕಾರ ಸ್ಮರಿಸಿದರು.

ಸರ್ ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಶೈಲಜಾ ಎಸ್. ಹೊಸಳ್ಳೇರ ಮಾತನಾಡಿ, ಕಾಲೇಜು ಹಲವಾರು ಪ್ರತಿಭಾನ್ವಿತ ಪವರ್ ಲಿಪ್ಟರ್ ಪ್ರತಿಭೆಗಳನ್ನು ಒಳಗೊಂಡಿದೆ. ಈ ಕಾಲೇಜಿಗೆ ಲಭಿಸಿರುವ ಬಹುಮಾನಗಳ ಪಟ್ಟಿಯನ್ನು ಗಮನಿಸಿದರೆ ಈ ಕಾಲೇಜಿನ ಕ್ರೀಡಾ ಸಾಧನೆ ತಿಳಿಯುತ್ತದೆ ಎಂದರು.

ವೇದಿಕೆಯಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ, ಅಸೋಸಿಯೇಷನ್ ಜಿಲ್ಲಾಧ್ಯಕ್ಷ ವೈ.ನಟರಾಜ್, ಹಿರಿಯ ಕ್ರೀಡಾಪಟುಗಳಾ ವೀರಭದ್ರಯ್ಯ, ಮಸ್ತಾನ್, ವರದರಾಜ್ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಚ್.ಎಸ್. ಶಿವರುದ್ರಪ್ಪ ನಿರೂಪಣೆ ಮಾಡಿದರು. ಜಿಲ್ಲೆಯ ವಿವಿಧೆಡೆಗಳಿಂದ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

- - -

-ಡಿ16ಬಿಡಿವಿಟಿ1(ಎ):

ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಾಗೂ ರಾಜ್ಯಮಟ್ಟದ ಎಲ್ಲ ವಿಭಾಗದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮವನ್ನು ಬಿ.ಎಲ್.ಚಂದ್ವಾನಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ