ರಕ್ತದಾನ ಶ್ರೇಷ್ಠದಾನ, ಜೀವದಾನ, ಮಹಾದಾನ ಎನ್ನುವಂತೆ ಎಲ್ಲರೂ ಮೂರು ತಿಂಗಳಿಗೆ ಒಂದು ಸಾರಿ ರಕ್ತದಾನ ಮಾಡಬಹುದು, ಇದರಿಂದ ಹೊಸ ರಕ್ತ ಉತ್ಪತ್ತಿಯಾಗಿ ದೇಹದಲ್ಲಿ ಚೈತನ್ಯ ಬರುವುದು. ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದು ಪ್ರೊ.ಉಮಾ ಕೋಳಿ ಹೇಳಿದರು.
ಮುಂಡರಗಿ: ರಕ್ತದಾನ ಶ್ರೇಷ್ಠದಾನ, ಜೀವದಾನ, ಮಹಾದಾನ ಎನ್ನುವಂತೆ ಎಲ್ಲರೂ ಮೂರು ತಿಂಗಳಿಗೆ ಒಂದು ಸಾರಿ ರಕ್ತದಾನ ಮಾಡಬಹುದು, ಇದರಿಂದ ಹೊಸ ರಕ್ತ ಉತ್ಪತ್ತಿಯಾಗಿ ದೇಹದಲ್ಲಿ ಚೈತನ್ಯ ಬರುವುದು. ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದು ಪ್ರೊ.ಉಮಾ ಕೋಳಿ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಜ.ತೋಂಟದಾರ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನದಂಗವಾಗಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ.ಕೆ ಮಾತನಾಡಿ, ರಕ್ತದಾನದಂತೆ ಅಂಗಾಂಗದಾನವು ಮಹತ್ವದಾಗಿದ್ದು, ದಾನಿಗಳ ಸ್ಮರಣೆ ಮಾಡುವುದು ಸ್ತುತ್ಯಾರ್ಹವಾಗಿದೆ. ರಕ್ತದಾನ ಮಾಡುವವರು 18 ರಿಂದ 65 ವಯೋಮಾನದವರು ಇರಬೇಕು, ಅವರ ತೂಕ 45 ಕೆ.ಜಿ.ಗಿಂತ ಹೆಚ್ಚಿಗಿರಬೇಕು, ಹಿಮೋಗ್ಲೋಬಿನ್ ಪ್ರಮಾಣ 12.5 ಗಿಂತ ಹೆಚ್ಚಿಗೆ ಇರವವರು ಮಹಿಳೆ ಮತ್ತು ಪುರುಷ ಎಂಬ ಭೇದ ಭಾವವಿಲ್ಲದೆ ರಕ್ತದಾನ ಮಾಡಬಹುದು ಎಂದು ತಿಳಿಸಿದರು. ಹಿಂದಿನ ಕಾಲದಲ್ಲಿ ಅನ್ನದಾನ, ನೇತ್ರದಾನ, ಗೋದಾನ, ಭೂದಾನ ಶ್ರೇಷ್ಠವಾಗಿದ್ದವು, ಅವೆಲ್ಲಕ್ಕಿಂತ ರಕ್ತದಾನ ಇಂದಿನ ಶ್ರೇಷ್ಠ ದಾನವಾಗಿದೆ. ರಕ್ತದಾನದಿಂದ ದಾನಿಯ ದೇಹದಲ್ಲಿ 24 ಗಂಟೆಯೊಳಗಾಗಿ ಹೊಸ ರಕ್ತ ಉತ್ಪತ್ತಿ ಪ್ರಾರಂಭವಾಗುತ್ತದೆ, ಕೊಬ್ಬಿನಾಂಶವನ್ನು ಕಡಿಮೆ ಮಾಡುತ್ತದೆ, ಹೃದಯ ರೋಗವನ್ನು ಕಡಿಮೆ ಮಾಡುತ್ತದೆ, ಜ್ಞಾಪಕ ಶಕ್ತಿಯನ್ನು ವೃದ್ಧಿಸುತ್ತದೆ, ಇಷ್ಟೇಲ್ಲಾ ಲಾಭಗಳಿರುವುದರಿಂದ ಪ್ರತಿಯೊಬ್ಬರಿಗೂ ರಕ್ತದಾನ ಮಾಡಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಮಾತನಾಡಿ, ರಕ್ತದಾನವು ಸಾಮಾಜಿಕ ಸೇವೆಯಾಗಿದ್ದು, ಸದೃಢ ಯುವಕ ಯುವತಿಯರು, ಸಾರ್ವಜನಿಕರು ಸ್ವ-ಇಚ್ಛೆಯಿಂದ ರಕ್ತದಾನ ಮಾಡಬೇಕು ಎಂದು ತಿಳಿಸಿದರು.ಜಾಥಾ ಕಾರ್ಯಕ್ರಮವು ಜ.ತೋಂಟದಾರ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹುಡ್ಕೋ ಕಾಲನಿಯಲ್ಲಿ ರಕ್ತದಾನ ಕುರಿತು ಜಾಗೃತಿ ಮೂಡಿಸಲಾಯಿತು.ಈ ವೇಳೆ ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಬಸವರಾಜ ಲಾಳಗಟ್ಟಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನರ, ಪ್ರೊ.ಕಾವೇರಿ ಭೋಲಾ, ಪ್ರೊ.ತಿಮ್ಮನಾಯಕ ಹಾಗೂ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.