ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ

KannadaprabhaNewsNetwork |  
Published : Sep 19, 2025, 01:00 AM IST
ಸುದ್ದಿಚಿತ್ರ ೧ ರಕ್ತದಾನಿಗಳಿಗೆ ಅಭಿನಂದನಾ ಪತ್ರ ವಿತರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ | Kannada Prabha

ಸಾರಾಂಶ

ರಕ್ತದಾನವು ಅತ್ಯಂತ ದೊಡ್ಡದಾನ ಎಂದು ಅರ್ಥೈಸುತ್ತದೆ. ರಕ್ತದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಬಹುದು, ಅಲ್ಲದೆ ಇದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಹಾಗೂ ಮಾನವೀಯ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ. ಇತ್ತಿಚಿನ ದಿನಗಳಲ್ಲಿ ರಸ್ತೆ ಅಪಘಾತಗಳು, ಶಸ್ತ್ರ ಚಿಕಿತ್ಸೆ ಮತ್ತಿತರ ಸಂದರ್ಭಗಳಲ್ಲಿ ವೈದ್ಯರು ರೋಗಿಗೆ ರಕ್ತದ ಅಗತ್ಯವಿದೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ, ಮಾನವನ ರಕ್ತ, ಮಾನವನಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ ಎಂದು ಭಾರತೀಯ ಜನತಾ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು.ನಗರದ ಬಿಜೆಪಿ ಕಚೇರಿಯ ಸೇವಾ ಸೌಧದ ಆವರಣದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75 ನೇ ಜನ್ಮ ದಿನದ ಅಂಗವಾಗಿ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಮೆಮೋರಿಯಲ್ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ರಾಮಚಂದ್ರ ಗೌಡ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.ಮತ್ತೊಬ್ಬರ ಜೀವ ಉಳಿಸಬಹುದು

ರಕ್ತದಾನವು ಅತ್ಯಂತ ದೊಡ್ಡದಾನ ಎಂದು ಅರ್ಥೈಸುತ್ತದೆ. ರಕ್ತದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಬಹುದು, ಅಲ್ಲದೆ ಇದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಹಾಗೂ ಮಾನವೀಯ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ. ಇತ್ತಿಚಿನ ದಿನಗಳಲ್ಲಿ ರಸ್ತೆ ಅಪಘಾತಗಳು, ಶಸ್ತ್ರ ಚಿಕಿತ್ಸೆ ಮತ್ತಿತರ ಸಂದರ್ಭಗಳಲ್ಲಿ ವೈದ್ಯರು ರೋಗಿಗೆ ರಕ್ತದ ಅಗತ್ಯವಿದೆ. ತಕ್ಷಣ ರಕ್ತ ತನ್ನಿ ಎಂದು ರೋಗಿಯ ಸಂಬಂಧಿಗಳಿಗೆ ಹೇಳುತ್ತಾರೆ. ಅಂತಹ ಸಂದರ್ಭಗಳಲ್ಲಿ ಸಕಾಲದಲ್ಲಿ ರಕ್ತ ಸಿಕ್ಕರೆ ರೋಗಿಯ ಪ್ರಾಣ ಉಳಿಯುತ್ತದೆ ಎಂದರು.134 ಯೂನಿಟ್ ರಕ್ತ ಸಂಗ್ರಹಶ್ರೀ ಸತ್ಯಸಾಯಿ ಮೆಮೋರಿಯಲ್ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರವು ಬೆಳಗ್ಗೆ 09 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಒಟ್ಟು 134 ಯುನಿಟ್ ರಕ್ತ ಸಂಗ್ರಹವಾಗಿದೆ. ಇದಕ್ಕೂ ಮುನ್ನ ನಗರದ ಕೋಟೆ ವೃತ್ತದಲ್ಲಿ ಕೇಕ್ ಕತ್ತರಿಸಿದರು. ಶ್ರೀ ವಾಸವಿ ವಿದ್ಯಾ ಸಂಸ್ಥೆಯ ಮಕ್ಕಳಿಗೆ ಸಿಹಿ ಹಂಚಿ ಗಿಡ ನೆಟ್ಟು ನೀರು ಹಾಕಲಾಯಿತು.

ರತ್ಕದಾನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ , ಬಿಜೆಪಿ ಗ್ರಾಮಾಂತರ ಮಂಡಲಾಧ್ಯಕ್ಷ ಸೀಕಲ್ ಆನಂದ್ ಗೌಡ ,ನಿಕಟ ಪೂರ್ವ ಅಧ್ಯಕ್ಷ ಸುರೇಂದ್ರ ಗೌಡ ,ನಗರ ಮಂಡಲ ಅಧ್ಯಕ್ಷ ಕೆ.ನರೇಶ್ ,ನಗರಸಭೆ ಸದಸ್ಯ ಎಸ್.ಎ.ನಾರಾಯಣಸ್ವಾಮಿ,ಕನಕಪ್ರಸಾದ್, ಡಾ.ಸತ್ಯನಾರಾಯಣ ರಾವ್, ನಂದೀಶ್, ಆನೆಮಡಗು ಮುರಳಿ, ರಾಮಕೃಷ್ಣಪ್ಪ,ರಾಷ್ಟ್ರೀಯ ಕ್ರೀಡಾ ಪಟು ಜಯಂತಿ ಗ್ರಾಮ ನಾರಾಯಣಸ್ವಾಮಿ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರು ಕಾರ್ಯಕರ್ತರು ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ