ರಕ್ತದಾನ ಮಾಡಿ ಪ್ರಾಣ ಉಳಿಸಿ

KannadaprabhaNewsNetwork |  
Published : Apr 17, 2025, 12:01 AM IST
16ಎಚ್ಎಸ್ಎನ್8: ಬೇಲೂರು ವೈಡಿಡಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ವತಿಯಿಂದ ರಕ್ತದಾನ ಶಿಬಿರ ಮತ್ತು ಆರೋಗ್ಯ ಅರಿವು ಕಾರ್ಯಕ್ರಮವ ನಡೆಸಲಾಯಿತು. | Kannada Prabha

ಸಾರಾಂಶ

ರಕ್ತದಾನದಿಂದ ಹಲವು ಪ್ರಯೋಜಗಳಿವೆ. ಒಂದು ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನ ಅತ್ಯಂತ ಪ್ರಾಮುಖ್ಯತೆ ಪಡೆಯುತ್ತದೆ. ಇತ್ತೀಚಿನ ದಿನದಲ್ಲಿ ಹೆಚ್ಚು ಅಪಘಾತಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಕ್ತದಾನದ ಬಗ್ಗೆ ಹೆಚ್ಚು ಜಾಗೃತಿಯನ್ನು ಮೂಡಿಸುವ ಅವಶ್ಯವಿದೆ. ಸದೃಢವಾಗಿರುವ ಮನುಷ್ಯ ೧೮ರಿಂದ ೬೦ ವರ್ಷ ಒಳಗಿನ ವ್ಯಕ್ತಿ ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಬಹುದು. ತಪ್ಪು ಕಲ್ಪನೆಗಳಿಂದ ಹೊರ ಬಂದು ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಯುವಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಕ್ತದಾನ ಮಾಡುವ ಮೂಲಕ ಸದೃಢರಾಗಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೇಲೂರು ಸಭಾಪತಿ ವೈ.ಎಸ್.ಸಿದ್ದೇಗೌಡ ಹೇಳಿದರು.

ಪಟ್ಟಣದ ಹೊರವಲಯದಲ್ಲಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೇಲೂರು ಹಾಗೂ ವೈಡಿಡಿ ಕಾಲೇಜು,ಐಕ್ಯೂಎಸಿ ಯುವ ರೆಡ್ ಕ್ರಾಸ್ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ ಮತ್ತು ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ತದಾನದಿಂದ ಹಲವು ಪ್ರಯೋಜಗಳಿವೆ. ಒಂದು ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನ ಅತ್ಯಂತ ಪ್ರಾಮುಖ್ಯತೆ ಪಡೆಯುತ್ತದೆ. ಇತ್ತೀಚಿನ ದಿನದಲ್ಲಿ ಹೆಚ್ಚು ಅಪಘಾತಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಕ್ತದಾನದ ಬಗ್ಗೆ ಹೆಚ್ಚು ಜಾಗೃತಿಯನ್ನು ಮೂಡಿಸುವ ಅವಶ್ಯವಿದೆ. ಸದೃಢವಾಗಿರುವ ಮನುಷ್ಯ ೧೮ರಿಂದ ೬೦ ವರ್ಷ ಒಳಗಿನ ವ್ಯಕ್ತಿ ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಬಹುದು. ತಪ್ಪು ಕಲ್ಪನೆಗಳಿಂದ ಹೊರ ಬಂದು ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದರು.

ಬೇಲೂರು ವೈಡಿಡಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ ಮಾತನಾಡಿ, ಸದೃಢವಾದ ಮನುಷ್ಯ ರಕ್ತದಾನಕ್ಕೆ ಯಾವುದೇ ಅಡತಡೆ ಇಲ್ಲದೆ ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು. ರಕ್ತದಾನವನ್ನು ಖಾಸಗಿ ಸಂಸ್ಥೆಗಳಿಗೆ ನೀಡಿದೆ ಸರ್ಕಾರಿ ಆಸ್ಪತ್ರೆಗಳು ನಡೆಸುವ ಶಿಬಿರಕೆ ಮಹತ್ವ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈಡಿಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಮಹೇಶ್, ತಾಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಅದ್ಧೂರಿ ಚೇತನ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅಜಿತ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಅರೇಹಳ್ಳಿ ವೈದ್ಯಾಧಿಕಾರಿ ಡಾ.ಮಮತಾ, ಐಕ್ಯೂಎಸಿ ಸಂಚಾಲಕ ಡಾ.ನಾಗೇಂದ್ರಪ್ಪ, ಯುವ ರೆಡ್‌ಕ್ರಾಸ್ ಸಂಚಾಲಕ ಮೋಹನ್ ಕುಮಾರ್, ಬೇಲೂರು ರೆಡ್‌ಕ್ರಾಸ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಧನಂಜಯ್, ರಾಜಕುಮಾರ್, ಸುಲೈಮಾನ್, ವೀರಭದ್ರಪ್ಪ, ಬಾಬು, ಡಾ.ಚೇತನ್ ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...