ರಕ್ತದಾನ ಮಾಡಿ, ಜೀವವನ್ನು ಉಳಿಸಿ: ಶಾಸಕ ಶಿವಗಂಗಾ

KannadaprabhaNewsNetwork |  
Published : Jul 04, 2024, 01:04 AM IST
ತಾಲೂಕಿನ ಕೆರೆಬಿಳಚಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸ್ವಯಂ ಪ್ರೇರಿತ ರಕ್ತಧಾನ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಬಸವರಾಜ್ ವಿ.ಶಿವಗಂಗಾ | Kannada Prabha

ಸಾರಾಂಶ

Donate blood, save life

- ಆರೋಗ್ಯ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

----ಕನ್ನಡಪ್ರಭವಾರ್ತೆ ಚನ್ನಗಿರಿ

ಪ್ರಸ್ತುತ ವೈಜ್ಞಾನಿಕ ಯುಗದಲ್ಲಿ ಕೃತಕವಾಗಿ ಎಲ್ಲಾ ವಸ್ತುಗಳನ್ನು ತಯಾರು ಮಾಡುವ ಅವಕಾಶಗಳಿದೆ. ಆದರೆ ಮನುಷ್ಯನ ರಕ್ತವನ್ನು ಕೃತಕವಾಗಿ ತಯಾರು ಮಾಡಲು ಸಾಧ್ಯವಿಲ್ಲ. ಅದರಿಂದ ಪ್ರತಿಯೊಬ್ಬ ಆರೋಗ್ಯವಂತ ಮನುಷ್ಯರು ತಮ್ಮ ರಕ್ತವನ್ನು ದಾನ ಮಾಡುವ ಮೂಲಕ ಇನ್ನೊಬ್ಬರ ಜೀವವನ್ನು ರಕ್ಷಿಸಲು ಮುಂದಾಗಬೇಕು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ಮಂಗಳವಾರ ತಾಲೂಕಿನ ಕೆರೆಬಿಳಚಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ನೀವು ದಾನವಾಗಿ ನೀಡಿದ ರಕ್ತದಿಂದ ಇನ್ನೊಬ್ಬರ ಜೀವವನ್ನು ಉಳಿಯುತ್ತದೆ ಎಂದರೆ ಅದಕ್ಕಿಂತ ಪುಣ್ಯ ಬೇಕೇ? ಎಂದರು. ಚನ್ನಗಿರಿ ಪಟ್ಟಣದಲ್ಲಿ ಸುಸಜ್ಜಿವಾದ 250 ಹಾಸಿಗೆ ಇರುವ ತಾಲೂಕು ಆಸ್ಫತ್ರೆಯ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ. ದಿನದ 24ಗಂಟೆಗಳ ಕಾಲ ಕ್ಷೇತ್ರದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವುದೇ ನನ್ನ ಗುರಿಯಾಗಿದೆ ಎಂದರು.

ಮುಂದುವರೆದು ಮಾತನಾಡಿದ ಅವರು, ತಾಲೂಕಿನಲ್ಲಿರುವ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಸಹ ನುರಿತ ವೈದ್ಯರಿದ್ದೀರಿ. ಜನರಿಗೆ ಸಣ್ಣ-ಪುಟ್ಟ ಖಾಯಿಲೆಗಳಿದ್ದಾಗ ಬೇರೆಡೆ ಹೋಗಲು ಹೇಳಬೇಡಿ. ಅದರ ಬದಲು ಇಲ್ಲಿಯೇ ಉತ್ತಮ ಚಿಕಿತ್ಸೆ ನೀಡಿ. ನಿಮಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ನಾನು ಒದಗಿಸಿಕೊಡುತ್ತೇನೆ ಎಂದು ಅಭಯ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್, ಜಯದೇವ್, ತಜುನಾಭೀ, ಸಾನಿಯ ಸುಲ್ತಾನ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

----

2ಕೆಸಿಎನ್ಜಿ2

ತಾಲೂಕಿನ ಕೆರೆಬಿಳಚಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶಾಸಕ ಬಸವರಾಜ್ ವಿ.ಶಿವಗಂಗಾ ನೆರವೇರಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ