ತುರ್ತು ಸಂದರ್ಭದಲ್ಲಿ ರಕ್ತದಾನದಿಂದ ಜೀವ ಉಳಿಸಲು ಸಾಧ್ಯ: ಎಸ್ಪಿ ಚನ್ನಬಸವಣ್ಣ

KannadaprabhaNewsNetwork |  
Published : Apr 09, 2024, 12:49 AM IST
ಚಿತ್ರ  8ಬಿಡಿಆರ್56 | Kannada Prabha

ಸಾರಾಂಶ

ಬೀದರ್‌ ನಗರದ ಓಲ್ಡ್ ಸಿಟಿಯ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 52 ನೌಕರರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಬೀದರ್

ರಕ್ತದಾನವು ಅಪಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ನೆರವಾಗುತ್ತದೆ. ರಕ್ತದಾನ ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್‌ ಹೇಳಿದರು.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ ಹಾಗೂ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಮಾತನಾಡಿ, ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೊಸ ಉತ್ಸಾಹ ಹಾಗೂ ಚೈತನ್ಯ ಮೂಡುತ್ತದೆ. ಸರ್ಕಾರಿ ನೌಕರರು ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಯುವ ಜನರು ಸ್ವಯಂ ಪ್ರೇರಣೆಯಿಂದ ರಕ್ತದಾನಕ್ಕೆ ಮುಂದೆ ಬರಬೇಕು ಎಂದರು.

ನಗರದ ಓಲ್ಡ್ ಸಿಟಿಯ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 52 ಸರ್ಕಾರಿ ನೌಕರರು ರಕ್ತದಾನ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

ಶಿಬಿರದಲ್ಲಿ 52 ಯುನಿಟ್ ರಕ್ತ ಸಂಗ್ರಹವಾಯಿತು. ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶರಣಪ್ಪ ಮುಡಬಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಮಹೇಶ ಬಿರಾದಾರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕಿರಣ ಪಾಟೀಲ, ಜಿಲ್ಲಾ ಡಿವಿಬಿಡಿಸಿಪಿ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಂಕರೆಪ್ಪ ಬೊಮ್ಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಅನಿಲ್ ಚಿಂತಾಮಣಿ, ವಿವಿಧ ಸಂಘಗಳ ಪ್ರಮುಖರಾದ ಡಾ. ದೇವಕಿ ನಾಗೂರೆ, ಯೇಸುದಾಸ್ ಥೋರೆ, ಶಿವಕುಮಾರ ಗುಮ್ಮಾ, ಶಕುಂತಲಾ ಕಾಡಾದೆ, ರವಿ ವಗ್ಗೆ, ಪ್ರದೀಪ್, ಸ್ವಾಮಿ ವಿವೇಕಾನಂದ, ಶಮಿ ಪಟೇಲ್, ವಿದ್ಯಾಸಾಗರ, ಸಂಗಮೇಶ ರೆಡ್ಡಿ ಮೊದಲಾದವರು ಇದ್ದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸೋಹೆಲ್ ಪ್ರಾಸ್ತಾವಿಕ ಮಾತನಾಡಿದರು. ಡಾ. ಅನಿಲ್ ಎಕಲೂರೆ ಸ್ವಾಗತಿಸಿದರು. ಡಾ. ಸತೀಶ್ ಪಾಟೀಲ ಸ್ವಾಗತಿಸಿದರು. ಸುನೀಲ್ ಕಸ್ತೂರೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌