-ಭೋವಿ ಗುರುಪೀಠದಲ್ಲಿ ನಡೆದ ವಧು-ವರರ ಅನ್ವೇಷಣಾ ಸಮಾರಂಭದಲ್ಲಿ ಡಾ.ಶಾಂತವೀರ ಶ್ರೀ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ವಿಚ್ಚೇದನದಂತಹ ಸುದ್ದಿಗಳಿಗೆ ಮಾಧ್ಯಮಗಳು ವೈಭವೀಕರಣ ಮಾಡುವುದು ತರವಲ್ಲ ಎಂದು ಹೊಸದುರ್ಗ ಕುಂಚಿಟಿ ಮಹಾ ಸಂಸ್ಥಾನ ಮಠದ ಡಾ.ಶಾಂತವೀರ ಸ್ವಾಮೀಜಿ ಹೇಳಿದರು.ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ದೀಕ್ಷಾ ರಜತ ಮಹೋತ್ಸವದ ಪ್ರಯುಕ್ತ ಭೋವಿ ಗುರುಪೀಠದಲ್ಲಿ ನಡೆದ ವಧು-ವರರ ಅನ್ವೇಷಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವನದಲ್ಲಿಯೂ ವಿವಾಹವೆಂಬುದು ಪ್ರಮುಖ ಘಟ್ಟ. ನಗರೀಕೃತ ಜೀವನದಲ್ಲಿ ವಿವಾಹ ಸಂಬಂಧಗಳು ಬಿರುಕು ಬಿಟ್ಟುಕೊಳ್ಳುತ್ತಿರುವುದು ನೋವಿನ ಸಂಗತಿ. ವಿಚ್ಚೇದನಗಳ ವೈಭವೀಕರಣ ಕೌಟುಂಬಿಕ ಬುನಾದಿಗಳನ್ನು ಅಲುಗಾಡಿಸಿದಂತಿದೆ ಎಂದರು.
ರಾಜ್ಯಾದ್ಯಂತ ಹದಿನೈದು ಲಕ್ಷಕ್ಕೂ ಹೆಚ್ಚು ಕಿಮೀ ಸುತ್ತಾಡಿ ಭೋವಿ ಸಮಾಜವನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿರುವ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಮರ್ಪಣಾ ಭಾವದಿಂದ ರಾಷ್ಟ್ರದ ಗಮನ ಸೆಳೆಯುವ ಗಟ್ಟಿ ವ್ಯಕ್ತಿತ್ವ ಹೊಂದಿ ಜನಮನ್ನಣೆ ಗಳಿಸುತ್ತಿದ್ದಾರೆ. ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಜೊತೆಗೆ ವಧು-ವರರ ಮುಖಾಮುಖಿ ಮಾಡಿಸುವ ಮೂಲಕ ಕೌಟುಂಬಿಕ ವ್ಯವಸ್ಥೆ ಗಟ್ಟಿಗೊಳಿಸುವ ಕಾಯಕ ನಿರಂತರ ಸಾಗಿದೆ ಎಂದು ಹೇಳಿದರು.
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬಸವಲಿಂಗಮೂರ್ತಿ ಸ್ವಾಮೀಜಿ, ಮಹಾಂತ ಸ್ವಾಮೀಜಿ, ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ, ಶಶಿಶೇಖರ ಸಿದ್ದಬಸವ ಸ್ವಾಮೀಜಿ, ಅನ್ನದಾನಿ ಭಾರತೀಯ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುಂಡಯ್ಯ ಮಹಾಸ್ವಾಮೀಜಿ, ವೇಮನಾನಂದ ಸ್ವಾಮೀಜಿ, ಇಮ್ಮಡಿ ಮೇದಾರ ಕೇತೇಶ್ವರ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಗವಿ ಸಿದ್ದೇಶ್ವರ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ, ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪ್ರಸನ್ನಾನಂದ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕೃಷ್ಣ ಯಾದವಾನಂದ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಬಸವ ಪ್ರಸಾದ ಸ್ವಾಮೀಜಿ, ಮಹಾಲಿಂಗ ಸ್ವಾಮೀಜಿ, ಮರುಳಸಿದ್ದ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ, ಕೆಪಿಸಿಸಿ ಕಾರ್ಯದರ್ಶಿ ನೇರಲಗುಂಟೆ ರಾಮಪ್ಪ ಇದ್ದರು.
ಪೋಟೋ: 19 ಸಿಟಿಡಿ8
---