ಗ್ಯಾರಂಟಿಗಳ ಬಗ್ಗೆ ಅಪಪ್ರಚಾರಕ್ಕೆ ಕಿವಿಗೊಡಬೇಡಿ

KannadaprabhaNewsNetwork |  
Published : Jun 25, 2026, 01:45 AM IST
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಕೆಲವರು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದರೂ, ಯೋಜನೆಗಳ ಅನುಷ್ಠಾನ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಸರ್ಕಾರ ನೀಡಿರುವ ಭರವಸೆಯಂತೆ ಗೃಹಲಕ್ಷ್ಮಿ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದ್ದು, ಫಲಾನುಭವಿ ಮಹಿಳೆಯರು ಹಾಗೂ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಸ್ಪಷ್ಟಪಡಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಕೆಲವರು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದರೂ, ಯೋಜನೆಗಳ ಅನುಷ್ಠಾನ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಸರ್ಕಾರ ನೀಡಿರುವ ಭರವಸೆಯಂತೆ ಗೃಹಲಕ್ಷ್ಮಿ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದ್ದು, ಫಲಾನುಭವಿ ಮಹಿಳೆಯರು ಹಾಗೂ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಸ್ಪಷ್ಟಪಡಿಸಿದರು.ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಕುರಿತು ವಿರೋಧ ಪಕ್ಷಗಳಿಂದ ನಿರಂತರವಾಗಿ ಅಪಪ್ರಚಾರ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದೆ. ಆದ್ದರಿಂದ ಯೋಜನೆಗಳ ಫಲಾನುಭವಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹೇಳಿದರು.ಸಭೆಯಲ್ಲಿ ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳ ಅನುಷ್ಠಾನದ ಕುರಿತು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಪ್ರಗತಿ ವರದಿಯನ್ನು ಮಂಡಿಸಿದರು. ವಿವಿಧ ಯೋಜನೆಗಳ ವ್ಯಾಪ್ತಿ, ಫಲಾನುಭವಿಗಳ ಸಂಖ್ಯೆ ಹಾಗೂ ಬಾಕಿ ಇರುವ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು.ಈ ವೇಳೆ ಮಾತನಾಡಿದ ಅನುಷ್ಠಾನ ಸಮಿತಿ ಸದಸ್ಯ ಜಾಜೂರು ಸಿದ್ದೇಶ್, ಗ್ರಾಮೀಣ ಭಾಗದ ಅನೇಕ ಪದವೀಧರ ಯುವಕರು ಮಾಹಿತಿ ಕೊರತೆಯಿಂದ ಯುವನಿಧಿ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಫಲಕಗಳು ಹಾಗೂ ವಿಶೇಷ ಮಾಹಿತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಅರ್ಹ ನಿರುದ್ಯೋಗಿ ಯುವಕರಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗೆ ಸಲಹೆ ನೀಡಿದರು.ನಗರದ ನೂತನ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಅಲ್ಲದೆ, ಹಳೆಯ ಬಸ್ ನಿಲ್ದಾಣದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್‌ಗಳು ಕಡ್ಡಾಯವಾಗಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಹಾಗೂ ಇಳಿಸುವ ವ್ಯವಸ್ಥೆ ಮಾಡಬೇಕು ಎಂದು ಧರ್ಮಶೇಖರ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಆಹಾರ ಇಲಾಖೆ, ಸಾರಿಗೆ ಇಲಾಖೆ, ಉದ್ಯೋಗ ವಿನಿಮಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಪುರುಷೋತ್ತಮ್, ಪ್ರದೀಪ್, ಕಮಲಮ್ಮ, ಕಾಂತರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಮಹೇಶ ಟೆಂಗಿನಕಾಯಿ ಜನ್ಮದಿನ: ವಿವಿಧ ಕಾರ್ಯಕ್ರಮ
ಸೆಲ್ಫಿ ತೆಗೆದುಕೊಳ್ಳಲು ಹೋಗಿಕಾವೇರಿ ಬಿದ್ದು ಐವರು ಸಾವು