ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಅನ್ನಪೂರ್ಣ ಎಂ.

KannadaprabhaNewsNetwork |  
Published : Jun 01, 2025, 01:57 AM IST
ಕಾರ್ಯಕ್ರಮವನ್ನು ಅನ್ನಪೂರ್ಣ ಎಂ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಡುವ ಜೀವನದ ಪಾಠವನ್ನು ಕಲಿಸುವ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡವೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.

ಗದಗ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಡುವ ಜೀವನದ ಪಾಠವನ್ನು ಕಲಿಸುವ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡವೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಹೇಳಿದರು.

ಅವರು ಸಭಾಪತಿ ಬಸವರಾಜ ಹೊರಟ್ಟಿ ದಂಪತಿ ದತ್ತು ಪಡೆದ ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 2025ನೇ ಸಾಲಿನ ಜಿಲ್ಲಾಮಟ್ಟದ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾಡಿನ ವಿವಿಧ ಕ್ಷೇತ್ರಗಳ ಸಾಧಕರು ಸರ್ಕಾರಿ ಶಾಲೆಗಳಲ್ಲಿಯೇ ಓದಿದ್ದು ಎಂಬುದನ್ನು ಯಾರೂ ಮರೆಯಬಾರದು. ಸರ್ಕಾರಿ ಶಾಲೆಗಳು ಇಂದು ಯಾವುದಕ್ಕೂ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂದಿವೆ. ಪ್ರತಿಯೊಬ್ಬ ಕಟ್ಟಕಡೆಯ ಮಗುವಿಗೆ ಶಿಕ್ಷಣ ಸಿಗಬೇಕು ಎಂಬುದು ಸರ್ಕಾರದ ಆದ್ಯತೆ. ಅದಕ್ಕಾಗಿ 50 ಕ್ಕೂ ಹೆಚ್ಚು ಅಗತ್ಯ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಕೊಡ ಮಾಡುವ ಮೂಲಕ ಜೊತೆಗೆ ಉಚಿತ ಶಿಕ್ಷಣವನ್ನು ಸರ್ಕಾರ ನೀಡುತ್ತಿದೆ. ಇಂಗ್ಲಿಷ್ ಮಾಧ್ಯಮ ಶಾಲೆಗಳ ವ್ಯಾಮೋಹದಲ್ಲಿ ಪಾಲಕರು ದುಬಾರಿ ವೆಚ್ಚ ಮಾಡಿ ವಿದ್ಯಾರ್ಥಿಗಳನ್ನು ಅಲ್ಲಿ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳದೇ ವಂಚಿತರಾಗುತ್ತಿದ್ದಾರೆ. ಮೊದಲು ಇಂಗ್ಲಿಷ್ ಮಾಧ್ಯಮ ವ್ಯಾಮೋಹದಿಂದ ಪಾಲಕರು ಹೊರಬರಲಿ. ಸರ್ಕಾರಿ ಶಾಲೆಗಳು ಇಂದು ಎಲ್ಲ ಮಕ್ಕಳ ಭವಿಷ್ಯ ಕಟ್ಟಲು ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ. ಅದರ ಸದುಪಯೋಗ ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ವಿನಂತಿಸಿದರು. ವಿದ್ಯಾರ್ಥಿಗಳು ತಮ್ಮ ಸುಂದರವಾದ ಭವಿಷ್ಯವನ್ನು ಕಟ್ಟಿಕೊಳ್ಳಲು ಹಲವಾರು ಸಂಕಲ್ಪಗಳೊಂದಿಗೆ ಮೊದಲ ಹೆಜ್ಜೆಯನ್ನು ಶಾಲೆಯತ್ತ ಇಡುವಂತಾಗಲಿ ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಶಾಲಾ ದತ್ತು ಉಸ್ತುವಾರಿ ಪಡೆದ ಡಾ. ಬಸವರಾಜ ಧಾರವಾಡ, ಡೈಯಟ್‌ ಪ್ರಾ. ಜಿ.ಎಲ್. ಬಾರಾಟಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ, ವಿ.ವಿ. ನಡುವಿನಮನಿ, ಉಪನ್ಯಾಸಕ ರವಿ ಪ್ರಕಾಶ, ಶಿಕ್ಷಕರ ಸಂಘಟನೆಯ ಬಿ.ಎಫ್. ಪೂಜಾರ ಮುಂತಾದವರು ಮಾತನಾಡಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷೆ ನಂದಾ ಅಶೋಕ ಖಟವಟೆ, ನಗರಸಭಾ ಸದಸ್ಯೆ ವಿದ್ಯಾವತಿ ಗಡಗಿ, ಶಂಕರ ಹಡಗಲಿ, ವಿ.ಎಂ. ಹಿರೇಮಠ, ಮಹೇಶ ಕುಚಬಾಳ, ವಿಜಯ ಕಿರೇಸೂರ, ಬಿ.ಕೆ. ನಿಂಬನಗೌಡ್ರ, ಎಸ್.ಆರ್. ಬಂಡಿ, ಎಫ್.ಸಿ. ಅಬ್ಬಿಗೇರಿ ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮೀ ಅಣ್ಣಿಗೇರಿ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ ಶಿಕ್ಷಕ ವೃಂದ ಭಾಗವಹಿಸಿದ್ದರು. ಎಂ.ಎಚ್. ಕಂಬಳಿ ಸ್ವಾಗತಿಸಿದರು. ಬಿ.ಎಸ್. ಯರಗುಡಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌