ಕುಷ್ಟಗಿ:
ಅಗ್ನಿಶಾಮಕ ಸೇವಾ ಸಪ್ತಾಹದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ ಜಾಗೃತಿಯ ಕುರಿತು ಕರಪತ್ರ ಹಂಚುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಏ. 14ರಿಂದ 20ರ ವರೆಗೆ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಈ ಬಾರಿ ಅಗ್ನಿ ಸುರಕ್ಷತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎನ್ನುವ ಧ್ಯೇಯ ವಾಕ್ಯವನ್ನಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಪ್ತಾಹದ ಅವಧಿಯಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ತಿಳಿವಳಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಸ್ ನಿಲ್ದಾಣ, ವಿವಿಧ ಸಂಘ-ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ವಾಣಿಜ್ಯ ಸಂಕಿರಣಗಳಲ್ಲಿ ಉಪನ್ಯಾಸ, ಪ್ರಾತ್ಯಕ್ಷಿಕೆ, ಅಣಕು ಪ್ರದರ್ಶನ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.ನಂತರ ಅಗ್ನಿಶಾಮಕ ಠಾಣೆ ಸಿಬ್ಬಂದಿ, ಪ್ರಮುಖ ವೃತ್ತ, ಸಾರ್ವಜನಿಕ ಆಸ್ಪತ್ರೆ, ಅಂಗಡಿ-ಮುಗ್ಗಟ್ಟುಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿದರು.
ಅಗ್ನಿಶಾಮಕ ಠಾಣೆಯ ಕಚೇರಿಯಲ್ಲಿ ಠಾಣಾಧಿಕಾರಿ ರಾಜು ನರಸಪ್ಪ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಅಗ್ನಿ ಅವಘಡದಲ್ಲಿ ಹುತಾತ್ಮರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ನಮನ ಸಲ್ಲಿಸಲಾಯಿತು.