ಬಳ್ಳಾರಿಯಲ್ಲಿ ಮನೆಬಾಗಿಲಿಗೆ ಇ-ಪೌತಿ ಅಭಿಯಾನ: ಪ್ರಶಾಂತ್‌ಕುಮಾರ್ ಮಿಶ್ರಾ

KannadaprabhaNewsNetwork |  
Published : Jul 10, 2025, 01:45 AM IST
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ... | Kannada Prabha

ಸಾರಾಂಶ

ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರ್ಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಮನವಿ ಮಾಡಿದ್ದಾರೆ.

ಬಳ್ಳಾರಿ: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರ್ಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.

ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ ಎಂದಿದ್ದಾರೆ.

ಸರ್ಕಾರಿ ಸೌಲಭ್ಯ ಸಿಗಲ್ಲ: ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೆ ಆ ಕುಟುಂಬ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಲಿದೆ. ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರ್ಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ