ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ ಮತ್ತು ಪೊಲೀಸರ ಕಾರ್ಯಮನೆ ಮಂದಿಗೆ ಮನವರಿಕೆಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶ.
ನವಲಗುಂದ: ನಾಗರಿಕರ ಸಮಸ್ಯೆ, ಸಲಹೆ, ದೂರು ಆಲಿಸಲು ‘ಮನೆ–ಮನೆಗೆ ಪೊಲೀಸ್’ ಪರಿಕಲ್ಪನೆ ಅನುಷ್ಠಾನ ಅಭಿಯಾನ ಎಂಬ ವಿನೂತನ ಕಾರ್ಯಕ್ರಮಕ್ಕೆ ಶನಿವಾರ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಾರ್ವಜನಿಕರಿಗೆ ಮನೆ ಮನೆಗೆ ಪೊಲೀಸ್ ಅಭಿಯಾನ ಸಂದರ್ಭದಲ್ಲಿ ಸೈಬರ್ ಅಪರಾಧ, ಮಾದಕ ವಸ್ತು ಡ್ರಗ್ಸ್, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು.
ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ ಮತ್ತು ಪೊಲೀಸರ ಕಾರ್ಯಮನೆ ಮಂದಿಗೆ ಮನವರಿಕೆಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶ ತಿಳಿಸಿದರು.
ಕಾರ್ಯಕ್ರಮದಲ್ಲಿ ಮನೆಯಲ್ಲಿರುವವರ ಹೆಸರು, ಮೊಬೈಲ್ ಸಂಖ್ಯೆ ಪಡೆದುಕೊಳ್ಳುವದು ಹಾಗೂ ಸಾರ್ವಜನಿಕರರಿಂದ ಅವರ ದೂರುಗಳನ್ನು ಮತ್ತು ಕೋರಿಕೆಗಳನ್ನು ಸ್ವೀಕರಿಸುವುದು ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಠಾಣೆಯಿಂದ ತಂಡ ರಚಿಸಲಾಗಿದೆ. ತಂಡದ ನೇತೃತ್ವವನ್ನು ಉಪ ಪೊಲೀಸ್ ನಿರೀಕ್ಷಕರು, ಸಹಾಯಕ ಉಪ ಪೊಲೀಸ್ ನಿರೀಕ್ಷಕರು ವಹಿಸಿಕೊಂಡು ಪ್ರತಿ ಮನೆಗೆ ಭೇಟಿ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ಸಾರ್ವಜನಿಕರು ಭೇಟಿಯ ವೇಳೆ ಪೊಲೀಸರೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಎಸ್.ಪಿ. ಡಾ. ಗೋಪಾಲ ಬ್ಯಾಕೋಡ ತಿಳಿಸಿದರು.
ಸಿಪಿಐ ರವಿಕುಮಾರ ಕಪ್ಪತ್ತನವರ ಮಾತನಾಡಿ, ಬಾಲ್ಯವಿವಾಹಕ್ಕೆ ಅವಕಾಶ ನೀಡಬೇಡಿ ಸಾರ್ವಜನಿಕರಿಗೆ ಏನೇ ತೊಂದರೆಗಳಿದ್ದರೂ 112ಗೆ ಕರೆ ಮಾಡಿದರೆ ಹತ್ತರಿಂದ ಹದಿನೈದು ನಿಮಿಷದಲ್ಲಿ ಪೊಲೀಸರು ತಮ್ಮನ್ನು ಭೇಟಿಯಾಗಲಿದ್ದು, ಅವರ ನೆರವು ಪಡೆಯಬಹುದಾಗಿರುತ್ತದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.