ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಕುರಿತು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ವಲಯಗಳಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್‌ಎಂ ಹಾಗೂ ಲಿಂಕ್ ವರ್ಕರ್ಸ್‌ಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದ್ದು, ಒಂದು ಸಾವಿರ ಮನೆಗೆ ಒಂದು ಬ್ಲಾಕ್ ರಚಿಸಿಕೊಳ್ಳುವುದಕ್ಕೆ ಸೂಚಿಸಲಾಗಿದೆ. ಈ ಮನೆಗಳಿಗೆ ತಂಡ ಭೇಟಿ ನೀಡಿ ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು. ಡೆಂಘೀ ಬಗ್ಗೆ ಅರಿವು ಮೂಡಿಸುವುದು ಹಾಗೂ ಜ್ವರ ಇರುವುದು ಕಂಡು ಬಂದವರನ್ನು ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸುವುದು ಸೇರಿದಂತೆ ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ನಿರ್ದೇಶಿಸಲಾಗಿದೆ ಎಂದರು.
15 ದಿನಕ್ಕೊಮ್ಮೆ ಮನೆ-ಮನೆ ಭೇಟಿ:ಪಾಲಿಕೆ ವ್ಯಾಪ್ತಿಯಲ್ಲಿ ಬರುವ 28 ಲಕ್ಷ ಮನೆಗಳ ಪೈಕಿ, 14 ಲಕ್ಷ ಮನೆಗಳು ಬಡ ವರ್ಗವಿರುವ ಪ್ರದೇಶ, ಜನ ಸಂಖ್ಯೆ ಹೆಚ್ಚಿರುವ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿರುವ 14 ಲಕ್ಷ ಮನೆಗಳಿಗೆ 15 ದಿನಕ್ಕೊಮ್ಮೆ ಭೇಟಿ ನೀಡಿ ಲಾರ್ವಾ ಉತ್ಪತ್ತಿ ತಾಣಗಳು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುವುದು. ಮನೆ-ಮನೆ ಸಮೀಕ್ಷೆ ಮಾಡುವ ಸಲುವಾಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದರು.
ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ:
ಮಹದೇವಪುರ, ದಕ್ಷಿಣ ವಲಯ ಹಾಗೂ ಪೂರ್ವ ವಲಯಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಎಲ್ಲೆಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿದೆಯೋ ಅಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರ ಪ್ರಕರಣಗಳು ಕಂಡುಬಂದರೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎನ್.ಎಸ್.1 ಟೆಸ್ಟ್ ಕಿಟ್ ಮೂಲಕ ಪರೀಕ್ಷೆ ಮಾಡಿ ಖಚಿತವಾದ ಬಳಿಕ ರಕ್ತದ ಮಾದರಿ ಸಂಗ್ರಹಿಸಿಕೊಂಡು ಪ್ರಯೋಗಾಲಯಗಳಿಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ಹರೀಶ್ ಕುಮಾರ್, ವಲಯ ಆಯುಕ್ತರಾದ ಆರ್.ಎಲ್ ದೀಪಕ್, ರಮೇಶ್, ವಿನೋತ್ ಪ್ರಿಯಾ, ರಮ್ಯಾ, ಕರೀಗೌಡ, ರಮ್ಯಾ, ಮುಖ್ಯ ಆರೋಗ್ಯಾಧಿಕಾರಿ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ನಗರದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದೀಗ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಸಲಿದ್ದಾರೆ.
ಡೆಂಘೀ ಪ್ರಕರಣಗಳ ವಿವರ (ಜನವರಿಯಿಂದ ಜೂನ್)
ವಲಯಪ್ರಕರಣಬೊಮ್ಮನಹಳ್ಳಿ122
ಪೂರ್ವ218ಮಹದೇವಪುರ386
ಆರ್.ಆರ್ ನಗರ75ದಕ್ಷಿಣ190
ಪಶ್ಚಿಮ141ಯಲಹಂಕ90
ದಾಸರಹಳ್ಳಿ8ಒಟ್ಟು1,230ಬಾಕ್ಸ್
ಈ ಹಿಂದಿನ ವರ್ಷಗಳ ಡೆಂಘೀ ವಿವರವರ್ಷಪ್ರಕರಣಗಳು
20199,43420201,127
20211,62920222,335
202311,13620241,230 (ಜೂನ್ ವರೆಗೆ)