ಮನೆ ಬಾಗಿಲಿಗೆ ಆರೋಗ್ಯ ಸೇವೆ 14 ರೋಗಗಳ ತಪಾಸಣೆ ಕೈಪಿಡಿ ಬಿಡುಗಡೆ

KannadaprabhaNewsNetwork |  
Published : Jul 25, 2025, 12:50 AM ISTUpdated : Jul 25, 2025, 12:57 AM IST
14 ರೋಗಗಳ ತಪಾಸಣೆ ಕೈಪಿಡಿ ಬಿಡುಗಡೆ  | Kannada Prabha

ಸಾರಾಂಶ

ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರುದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಇವರ ಸಹಯೋಗದಲ್ಲಿ ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ಸೋಜಾ ಕಾರ್ಯಕ್ರಮ ಉದ್ಘಾಟಿಸಿ, ಗೃಹ ಆರೋಗ್ಯ ಸೇವೆ ಮನೆಬಾಗಿಲಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದುದೆ. ಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಮಾತನಾಡಿ, ಸರ್ಕಾರದ ಆರೋಗ್ಯ ಇಲಾಖೆಯ ಎಲ್ಲಾ ಯೋಜನೆ/ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಇಲಾಖೆಯು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ. ಈ ಯೋಜನೆಯು ಜಿಲ್ಲೆಯ ಯಶಸ್ವಿ ಅನುಷ್ಠಾನಕ್ಕಾಗಿ ಪ್ರತಿಯೊಬ್ಬ ಅಧಿಕಾರಿ, ಕ್ಷೇತ್ರ ಸಿಬ್ಬಂದಿಗಳ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಮಾತನಾಡಿ, ಈ ಕಾರ್ಯಕ್ರಮದಡಿಯಲ್ಲಿ 30 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ 14 ಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಡಯಾಬಿಟಿಕ್ ಕಿಟಿನೋಪತಿ ಇತ್ಯಾದಿಗಳ ಬಗ್ಗೆ ಪರೀಕ್ಷೆ, ಚಿಕಿತ್ಸೆಗೊಳಪಡಿಸುವ ಉದ್ದೇಶವನ್ನು ಒಳಗೊಂಡಿದೆ ಎಂದರು.ಸುರತ್ಕಲ್ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್, ವೆನ್ಲಾಕ್‌ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಗೋಶನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ, ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿರಾಗ್, ಡಾ.ಸದಾನಂದ ಪೂಜಾರಿ, ಡಾ.ಸೌಮ್ಯ, ಡಾ. ಶರತ್‍ಬಾಬು, ಇದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ನಿರೂಪಿಸಿದರು.

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ