ಕನ್ನಡಪ್ರಭ ವಾರ್ತೆ ಬೀದರ್
ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಈ ವಸತಿ ನಿಲಯ ಕಟ್ಟಡವು ಸುಮಾರು 3 ಕೋಟಿ 25 ಲಕ್ಷ ರು. ವೆಚ್ಚದಲ್ಲಿ ಮಾಡಲಾಗುತ್ತಿದೆ. ಇದರಿಂದ ಸುಮಾರು 75 ರಿಂದ 100 ಕ್ರೀಡಾಪಟುಗಳಿಗೆ ನಿಲಯದಲ್ಲಿ ವಾಸ್ತವ್ಯ ಮಾಡಲು ಅನುಕೂಲವಾಗಲಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಉತ್ತಮ ಕ್ರೀಡಾಪಟುಗಳನ್ನು ತಯ್ಯಾರು ಮಾಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವ ರಹೀಂಖಾನ್, ನಗರಸಭೆ ಅಧ್ಯಕ್ಷ ಮೋಹ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಓ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ ಸೇರಿ ಕ್ರೀಡಾಭಿಮಾನಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.