ಕನ್ನಡಪ್ರಭ ವಾರ್ತೆ ನವದೆಹಲಿ
ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಹ್ಲಾದ ಜೋಶಿ ಅವರಿಗೆ ಪತ್ರ ಬರೆದು ಸ್ಪಷ್ಟಪಡಿಸಿದ್ದಾರೆ. ಈ ರೈಲು ಮಾರ್ಗ ಕುರಿತು ಇಂದಷ್ಟೇ ಜೋಶಿ ಅವರು ಸಂಸತ್ ಭವನದಲ್ಲಿ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ರೈಲ್ವೆ ಸಚಿವರಿಂದ ತ್ವರಿತ ಸ್ಪಂದನೆ ದೊರೆತಿದೆ.
ಆಲಮಟ್ಟಿ - ಕುಷ್ಟಗಿ ನೂತನ ರೈಲ್ವೆ ಮಾರ್ಗದ ಸರ್ವೇ ಕಾರ್ಯ ಆಗಲೇ ಮುಗಿದಿದ್ದು, 2026ರ ಮೇ ಅಂತ್ಯದೊಳಗೆ ಡಿಪಿಆರ್ ತಯಾರಾಗಲಿದೆ ಎಂದು ಖುದ್ದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೇ ಪ್ರಹ್ಲಾದ ಜೋಶಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.ಈ ನೂತನ ರೈಲು ಮಾರ್ಗದ ಕುರಿತು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್ ಅವರು ಸಚಿವ ಪ್ರಹ್ಲಾದ ಜೋಶಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈ ರೈಲು ಮಾರ್ಗದ ಅಗತ್ಯತೆ ಮನಗಂಡು ಸಚಿವ ಜೋಶಿ ಅವರು ಬುಧವಾರ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಮನವರಿಕೆ ಮಾಡಿಕೊಟ್ಟಿದ್ದರು. ಇದೀಗ ಜೋಶಿ ಅವರ ಒತ್ತಾಸೆಯಂತೆ ರೈಲ್ವೆ ಸಚಿವರು ನೂತನ ರೈಲು ಮಾರ್ಗಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಕೇಂದ್ರ ಸರ್ಕಾರ, ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚು ಹೆಚ್ಚು ಕಲ್ಪಿಸುವ ಮೂಲಕ ವಾಣಿಜ್ಯೋದ್ಯಮ ಜತೆಗೆ ಸಂಚಾರ ಸುವ್ಯವಸ್ಥೆಗೂ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದಿರುವ ಪ್ರಹ್ಲಾದ ಜೋಶಿ, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದ್ದಾರೆ.