ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಇಲ್ಲಿನ ಪೊಲೀಸ್ ಠಾಣೆ ಮುಂಭಾಗ ಮದ್ದೂರು ತಾಲೂಕು ಡಾ.ಅಂಬರೀಶ್ ಅಭಿಮಾನಿಗಳ ಒಕ್ಕೂಟ ಮತ್ತು ಎಂ.ಎಚ್. ಅಂಬರೀಶ್ ಫೌಂಡೇಶನ್ ವತಿಯಿಂದ ರೆಬೆಲ್ ಸ್ಟಾರ್ ಅಂಬರೀಶ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಡಾ.ಅಂಬಿ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಂಬಿ ಕಾಯಕ ಸೇವಾ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬರೀಶ್ ಅವರು ಸಿನಿಮಾ, ರಾಜಕೀಯ ಎರಡು ಕ್ಷೇತ್ರಗಳಲ್ಲೂ ಅಜಾತಶತ್ರುವಾಗಿದ್ದರು. ಸಂಸದರಾಗಿ, ಕೇಂದ್ರ ಸಚಿವರಾಗಿ, ಮಂಡ್ಯ ಕ್ಷೇತ್ರದ ಶಾಸಕರಾಗಿ, ರಾಜ್ಯದ ವಸತಿ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ಜಿಲ್ಲೆಗೆ ಕೊಡುಗೆ ನೀಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿದ್ದು ಜಿಲ್ಲೆಗೆ ನೀಡಿದ ಹಲವು ಕೆಲಸಗಳು ಶಾಶ್ವತವಾಗಿವೆ ಎಂದು ತಿಳಿಸಿದರು.ಅಂಬರೀಶ್ ರವರಿಗೆ ಹುಟ್ಟೂರು ಹಾಗೂ ಈ ಭಾಗದ ಜನರನ್ನು ಕಂಡರೆ ಅಪಾರ ಪ್ರೀತಿ. ಯಾರೇ ಅಭಿಮಾನಿಗಳು ಕಷ್ಟ ಅಂತ ಬಂದರೆ ತಕ್ಷಣ ಸ್ಪಂದಿಸಿ ಅವರಿಗೆ ನೆರವಾಗುತ್ತಿದ್ದರು. ಇವರು ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆ, ಜನಪರ ಕಾರ್ಯಗಳು ಇಂದಿಗೂ ಜೀವಂತವಾಗಿದ್ದು, ಹಲವರಿಗೆ ಆರಾಧ್ಯ ದೈವವೆನಿಸಿದ್ದಾರೆ ಎಂದು ಬಣ್ಣಿಸಿದರು.
ಪ್ರಧಾನಿ ಮೋದಿಯವರ ಕಾರ್ಯ ಶ್ಲಾಘನೀಯ:
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಾಂಡವಪುರ ಪುಸ್ತಕ ಮನೆಯ ಎನ್.ಅಂಕೇಗೌಡ, ಜಿಲ್ಲೆಯ ಹೆಸರಾಂತ ಕೀಲುಮೂಳೆ ತಜ್ಞ ಡಾ.ಎಚ್.ಎಸ್.ರವಿಕುಮಾರ್, ಮಂಡ್ಯ ಜಿಲ್ಲಾ ರಕ್ತದಾನಿ, ನೆಲದನಿ ಬಳಗದ ಅಧ್ಯಕ್ಷ ಎಂ.ಸಿ ಲಂಕೇಶ್ ಅವರ ಸಮಾಜ ಸೇವೆ ಪರಿಗಣಿಸಿ ಅಂಬಿ ಕಾಯಕ ಸೇವಾ ಪ್ರಶಸ್ತಿ ಹಾಗೂ ₹25 ಸಾವಿರ ನಗದು ನೀಡಿ ಗೌರವಿಸಲಾಯಿತು. ಇದೇ ವೇಳೆ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಐಪಿಎಸ್ ಹುದ್ದೆಗೆ ಆಯ್ಕೆಯಾಗಿರುವ ಜಿಲ್ಲೆಯ ಪ್ರತಿಭಾನ್ವಿತ ರೈತ ಕುಟುಂಬದ ಪ್ರತಿಭೆ ಧನಂಜಯ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಾದ ಟಿ.ಸಹನಾ, ಸಂಜನಾ, ತೇಜಸ್ವಿನಿ, ಫೈಜಾ ಅಲಿ ಸೈಯದ್ ಅವರಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.