ಡಾ.ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು

KannadaprabhaNewsNetwork |  
Published : Oct 05, 2026, 02:00 AM IST
29ಕೆಆರ್ ಎಂಎನ್ 1.ಜೆಪಿಜಿರಾಮನಗರದ ಹೊರ ವಲಯದ ಜಾನಪದ ಲೋಕದ ಸಮೀಪದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. | Kannada Prabha

ಸಾರಾಂಶ

ರಾಮನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ, ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು ಎಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ವಸಂತ್ ಹೇಳಿದರು

ರಾಮನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ, ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು ಎಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ವಸಂತ್ ಹೇಳಿದರು.

ನಗರದ ಹೊರವಲಯದ ಜಾನಪದ ಲೋಕದ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಮಹಿಳೆಯರು ಇಂದು ಸ್ವತಂತ್ರವಾಗಿ ಹಾಗೂ ಗೌರವಯುತವಾಗಿ ಜೀವನ ನಡೆಸಲು ಅಂಬೇಡ್ಕರ್ ಕೊಡುಗೆ ಮಹತ್ತರವಾದದ್ದು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ. ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನಿಸುವ ಹಾಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕು, ಸಮಾನತೆ ಮತ್ತು ಶಿಕ್ಷಣದ ಹಕ್ಕುಗಳಿಗೆ ಅಂಬೇಡ್ಕರ್ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು. ಮಹಿಳೆಯರ ಶಿಕ್ಷಣ ಮತ್ತು ಸಬಲೀಕರಣಕ್ಕೂ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸದೊಂದಿಗೆ ಜ್ಞಾನವನ್ನು ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪುಸ್ತಕಗಳನ್ನು ವಿತರಿಸಲಾಯಿತು. ಓದು ಮತ್ತು ಪ್ರಬಂಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳನ್ನು ಪ್ರಮಾಣ ಪತ್ರ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು. ಡಾ. ರುದ್ರೇಶ್, ಸುಮಿತ್ರ, ಹೇಮಾವತಿ, ಚಂದ್ರಪ್ಪ, ವೆಂಕಟೇಶಮೂರ್ತಿ, ಶಿಕ್ಷಕರಾದ ಎಂ.ಎಸ್ ಜೈಪ್ರಕಾಶ್, ಎಡಿಎಲ್‌ಆರ್ ಸಚಿನ್ ಇತರರು ಉಪಸ್ಥಿತರಿದ್ದರು.

29ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಹೊರವಲಯದ ಜಾನಪದ ಲೋಕದ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತ ರತ್ನ ಡಾ. ಅಂಬೇಡ್ಕರ್ ಓದು ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಲುವೆಗಳಿಗೆ ಸಮರ್ಪಕ ನೀರು ಹರಿಸಲು ತುಂಗಭದ್ರಾ ರೈತ ಸಂಘ ಆಗ್ರಹ
ಕಾಣೆಯಾದ ಮಕ್ಕಳ ಪತ್ತೆಗೆ ಪೊಲೀಸ್ ಇಲಾಖೆ ಚುರುಕು