ಸೂಲಿಬೆಲೆ: ದೇಶದಲ್ಲಿ ಸಮಾಜಿಕ ಅಸಮಾನತೆ ಹೋಗಲಾಡಿಸಲು ಹೋರಾಡಿದ ಸಮಾಜ ಸುಧಾರಕರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಾಧನೆ ಅನನ್ಯ ಎಂದು ರಾಜ್ಯ ವೈಜ್ಞಾನಿಕ ವಿಜ್ಞಾನ ಪರಿಷತ್ ಜಿಲ್ಲಾಧ್ಯಕ್ಷ ಎಂ.ಆರ್.ಉಮೇಶ್ ಹೇಳಿದರು.
ಹೊಸಕೋಟೆ ತಾಲೂಕು ಅಧ್ಯಕ್ಷ ರವಿಕುಮಾರ್ ಮಾತನಾಡಿ, ಅಂಬೇಡ್ಕರ್ ಸ್ವತಂತ್ರ ಭಾರತದ ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಸ್ವಾತಂತ್ರ್ಯ ಸಮಾನತೆ, ಭಾತೃತ್ವದ ತತ್ವಗಳಡಿ ಸಂವಿಧಾನ ರಚನೆ ಮಾಡಿದರು. ಅಸ್ಪೃಶ್ಯತೆ ನಿವಾರಣೆಗಾಗಿ ಸತ್ಯಾಗ್ರಹ ಹಾಗೂ ದಲಿತರ ದೇವಾಲಯ ಪ್ರವೇಶಕ್ಕಾಗಿ ಹೋರಾಟಗಳನ್ನು ನಡೆಸುವ ಮೂಲಕ ಸಾಮಾಜಿಕ ಸಮಾನತೆ ಹರಿಕಾರರಾದರು ಎಂದರು.
ಸೂಲಿಬೆಲೆ ಹೋಬಳಿ ಅಧ್ಯಕ್ಷ ನಯಾಜ್ ಖಾನ್ ಮಾತನಾಡಿ, ಮೇ ೧ರಂದು ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು ಮೂಢನಂಬಿಕೆ ಮತ್ತು ಮೌಢ್ಯಗಳ ಕುರಿತಾದ ವಿಚಾರಗೋಷ್ಠಿ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.ಕಾರ್ಯಕ್ರಮದಲ್ಲಿ ಸೂಲಿಬೆಲೆ ಹೋಬಳಿ ಅಧ್ಯಕ್ಷ ನಯಾಜ್ ಖಾನ್, ಮಹಿಳಾ ಅಧ್ಯಕ್ಷೆ ರಾಜೇಶ್ವರಿ, ಸುನೀತಾ ಉಮೇಶ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ವೆಂಕಟೇಶ್, ಕಸಾಪ ಅಧ್ಯಕ್ಷ ಪ್ರೇಮಕುಮಾರ್, ಆಶಾ ಕಾರ್ಯಕರ್ತೆ ಶಿಲ್ಪಾ, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಎಂ.ಪ್ರಶಾಂತ್, ಬೆಟ್ಟಹಳ್ಳಿ ಗೋಪಿನಾಥ್, ಜಿಯಾವುಲ್ಲಾ, ಸೈಯದ್ ಮಹಬೂಬ್ ಇತರರಿದ್ದರು.
ಸೂಲಿಬೆಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಎಂ.ಆರ್.ಉಮೇಶ್, ತಾಲೂಕು ಅಧ್ಯಕ್ಷರಾದ ರವಿಕುಮಾರ್, ನಯಾಜ್ ಖಾನ್, ರಾಜೇಶ್ವರಿ, ಸುನೀತಾಉಮೇಶ್ ಇತರರು ಪಾಲ್ಗೊಂಡಿದ್ದರು.