ತಾರತಮ್ಯ ನಾಶವಾಗುವವರೆಗೂ ಡಾ.ಅಂಬೇಡ್ಕರ್ ಜಯಂತಿಗೆ ಅರ್ಥವಿಲ್ಲ

KannadaprabhaNewsNetwork |  
Published : May 04, 2026, 01:30 AM IST
3 ಟಿವಿಕೆ 1 - ತುರುವೇಕೆರೆ ತಾಲ್ಲೂಕಿನ ದಂಡಿಶಿವರ ಹೋಬಳಿಯ ಡಿ.ಕಲ್ಕೆರೆ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಶಾಖೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ರವಿಕುಮಾರ್ ನಿ.ಹ ಮತ್ತು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಇದ್ದರು. | Kannada Prabha

ಸಾರಾಂಶ

ನಮ್ಮ ನಮ್ಮಲ್ಲಿ ತಾರತಮ್ಯ ನಾಶವಾಗುವವರೆಗೂ, ಎದೆಯೊಳಗೆ ಸಮಾನತೆ ಮೂಡುವವರೆಗೂ, ಡಾ.ಅಂಬೇಡ್ಕರ್ ಜಯಂತಿ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಹಾಗೂ ವಿಮರ್ಶಕ ರವಿಕುಮಾರ್ ನಿ. ಹಾ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ನಮ್ಮ ನಮ್ಮಲ್ಲಿ ತಾರತಮ್ಯ ನಾಶವಾಗುವವರೆಗೂ, ಎದೆಯೊಳಗೆ ಸಮಾನತೆ ಮೂಡುವವರೆಗೂ, ಡಾ.ಅಂಬೇಡ್ಕರ್ ಜಯಂತಿ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಹಾಗೂ ವಿಮರ್ಶಕ ರವಿಕುಮಾರ್ ನಿ. ಹಾ ಅಭಿಪ್ರಾಯಪಟ್ಟರು.

ತಾಲೂಕಿನ ದಂಡಿಶಿವರ ಹೋಬಳಿಯ ಡಿ.ಕಲ್ಕೆರೆ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಶಾಖೆ ಹಾಗೂ ಅಂಬೇಡ್ಕರ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಬಾ ಸಾಹೇಬರ ಜಯಂತಿಗಳನ್ನು ನಿರಂತರವಾಗಿ ಮಾಡಿಕೊಂಡೇ ಬರುತ್ತಿದ್ದೇವೆ. ಆದರೂ ದಮನಿತರ ಮೇಲೆ ಜಾತಿ, ದೌರ್ಜನ್ಯಗಳು, ಅವಮಾನಗಳು, ದೇವಸ್ಥಾನ ಪ್ರವೇಶ ನಿರಾಕರಣೆ, ಮಹಿಳಾ ದೌರ್ಜನ್ಯ, ಅತ್ಯಾಚಾರ, ಅವಕಾಶಗಳನ್ನು ವಂಚಿಸುವುದು ಇತ್ಯಾದಿಗಳು ಈಗಲೂ ನಡೆಯುತ್ತಿದೆ ಎಂದು ವಿಷಾದಿಸಿದರು. ಉಪನ್ಯಾಸಕ ಚಂದ್ರಯ್ಯ ತೊರೆಮಾವಿನಹಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇಒ ಅನಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ತಾಲೂ ಕು ಸಂಚಾಲಕರಾದ ಮಲ್ಲೂರು ತಿಮ್ಮೇಶ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್, ರಾಜ್ಯ ಮಹಿಳಾ ಸಂಚಾಲಕಿ ಲಾವಣ್ಯ, ಜಿಲ್ಲಾ ಸಂಘಟನಾ ಸಂಚಾಲಕ ನಾಗರಾಜು ಉಪ್ಪಾರಳ್ಳಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಮುತ್ತಣ್ಣ, ನಯಾಜ್ ಪಾಷಾ, ತಿಪಟೂರು ಕೊಪ್ಪ ಶಾಂತಣ್ಣ, ತಾಲ್ಲೂಕಿನ ಮುಖಂಡರು. ಗಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉಪನ್ಯಾಸಕ ಕೆ.ಟಿ.ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಜ್ಞಾನಾರ್ಜನೆಗೆ ಗುಣಾತ್ಮಕ, ಮೌಲ್ಯಯುತ ಚಿಂತನೆ ಅಗತ್ಯ: ಆರ್.ಎ.ನಾಗಣ್ಣ
ಮಕ್ಕಳಿಗೆ ಬುದ್ಧನ ಜೀವನ, ಸಾಧನೆ ತಿಳಿಸಿದರೆ ಸಮಾಜಕ್ಕೆ ಒಳಿತು