ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಚಳ್ಳಕೆರೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಡಾ.ಬಾಬೂ ಜಗಜೀವನ ರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಲಿಯುಗದ ಸೂರ್ಯನಾಗಿ ಎಲ್ಲಾ ಜಾತಿಯ ಜನರ ಧರ್ಮದ ಜನರ ಬಾಳಿನಲ್ಲಿ ಬೆಳಕಾಗಿದ್ದಾರೆ. ಅವರು ನಮ್ಮ ಬದುಕಿನಲ್ಲಿ ಪ್ರತಿದಿನವೂ ಜೊತೆಗಿರುತ್ತಾರೆ. ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಭಾರತದ ಆಡಳಿತ ವ್ಯವಸ್ಥೆಯನ್ನು ರೂಪಿಸಿದವರು ಎಂದರು.ಬಾಬು ಜಗಜೀವನರಾಂ ಅವರು ರಕ್ಷಣಾ ಮಂತ್ರಿಯಾಗಿ ಯುದ್ಧ ನಡೆಯುವ ಕಾಲದಲ್ಲಿ ದೇಶವನ್ನು ಹೇಗೆ ತೆಗೆದುಕೊಂಡು ಹೋಗಿದ್ದರು ಎಂಬುದು ಬಹಳ ಮುಖ್ಯವಾದುದು. ಹಸಿರು ಕ್ರಾಂತಿಯ ಹರಿಕಾರರಾಗಿ ಭಾರತದ ಉಪ ಪ್ರಧಾನಿಯಾಗಿ ಅವರು ಸಲ್ಲಿಸಿದ ಸೇವೆ ಶ್ಲಾಘನೀಯವಾದುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳದ ಕುರಿತು ಹೈಕೋರ್ಟ್ ತಡೆಯಾಜ್ಞೆ ಕುರಿತು ಸದನದಲ್ಲಿ ಮಾತನಾಡಿದ್ದನ್ನು ಪುನರುಚ್ಚರಿಸಿದರು.
ಒಳ ಮೀಸಲಾತಿ ಕುರಿತು ಕಾಂಗ್ರೆಸ್ ಸರ್ಕಾರ ಖಂಡಿತ ಬದ್ಧತೆ ಪ್ರದರ್ಶನ ಮಾಡಲಾಗುತ್ತದೆ. ಒಳ ಮೀಸಲಾತಿ ಬೇಡಿಕೆ ಈಡೇರಿಸಲಾಗುವುದು ಎಂದರು.
ಈ ವೇಳೆ ತಹಸೀಲ್ದಾರ್ ರೇಹಾನ ಪಾಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಆಯುಕ್ತ ಡಾ.ನಾಗವೇಣಿ, ತಾಪಂ ಇಒ ಎಚ್.ಶಶಿಧರ್, ಬಿಇಒ ಕೆ.ಎಸ್.ಸುರೇಶ್, ಮುಖಂಡರಾದ ಜಿ.ಮಾರಣ್ಣ, ಭೀಮನಕೆರೆ ಶಿವಮೂರ್ತಿ, ಸಿ.ಜೆ.ಜಯಕುಮಾರ್, ಕೆಡಿಪಿ ಸದಸ್ಯ ಮೀರಾಸಾಬಿಹಳ್ಳಿ ರಂಗಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಯ್ಯ, ನಗರಸಭೆ ಮಾಜಿ ಉಪಾಧ್ಯಕ್ಷ ಟಿ.ವಿಜಯಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ.ವೀರೇಶ್, ಗದ್ದಿಗೆ ತಿಪ್ಪೇಸ್ವಾಮಿ, ಡಿವೈಎಸ್‌ಪಿ ಸತ್ಯನಾರಾಯಣ ರಾವ್, ಚೌಳೂರ್ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೇವ್ಲಾ ನಾಯ್ಕ, ಗಾಂಧಿನಗರ ಚಂದ್ರಣ್ಣ, ನೇತ್ರಾವತಿ, ಗಿರಿಯಪ್ಪ, ಚಳ್ಳಕೆರೆಯಪ್ಪ, ವಿಶ್ವನಾಥ ರೆಡ್ಡಿ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇನ್ನಿತರರು ಭಾಗವಹಿಸಿದ್ದರು. ಪ್ರೊ.ಮಲ್ಲಿಕಾರ್ಜುನ ಹಲಸಂಗಿ, ನವೀನ್ ಪೂಜಾರಹಳ್ಳಿ, ಮಮತಾ, ಬಿ.ಆನಂದ ಕುಮಾರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಕುರಿತು ಉಪನ್ಯಾಸ ನೀಡಿದರು.
ಚಳ್ಳಕೆರೆ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಆಯ್ಕೆ ಮಾಡಿ ಸನ್ಮಾನಿಸುವ ಕುರಿತು ಒಂದು ಸಮಿತಿಯನ್ನು ನೇಮಕ ಮಾಡಲಾಗಿತ್ತು. ಈ ಸಮಿತಿಯಲ್ಲಿ ಸಮಾಜದ ಹಿರಿಯರು ಹಾಗೂ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇರುತ್ತಾರೆ. ಇಂತಹ ಸಮಿತಿ ಆಯ್ಕೆ ಮಾಡಿದ ಸನ್ಮಾನಿತರಿಗೆ ಸಮಾಜ ಕಲ್ಯಾಣ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ. ಸಮಿತಿಯಲ್ಲಿರುವ ದಲಿತ ಮುಖಂಡರಿಗೆ ಹೇಳಿ ನೀವೇ ವಿಷಯ ತಿಳಿಸಿ ಎಂದು ಕೈತೊಳೆದು ಕೊಂಡುಬಿಟ್ಟಿದ್ದಾರೆ.