ಸಮಾನತೆಯ ದೀಪ ಹಚ್ಚಿದ ಡಾ. ಬಿ.ಆರ್. ಅಂಬೇಡ್ಕರ್‌: ಸೋಮಣ್ಣ ಬೇವಿನಮರದ

KannadaprabhaNewsNetwork |  
Published : Apr 16, 2026, 02:30 AM IST
ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಸೋಮಣ್ಣ ಬೇವಿನಮರದ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಜಯಂತಿ ನಡೆಯಿತು.

ಶಿಗ್ಗಾಂವಿ: ಡಾ. ಬಿ.ಆರ್. ಅಂಬೇಡ್ಕರ್‌ ಅವರು ನಮ್ಮೆಲ್ಲರಿಗೂ ದಾರಿದೀಪವಾಗಿದ್ದಾರೆ. ಅವರು ರಚಿಸಿದ ಸಂವಿಧಾನ ಎಲ್ಲರಿಗೂ ಮಾರ್ಗದರ್ಶನವಾಗಿದೆ. ಅವರು ಹಚ್ಚಿದ ಸಮಾನತೆಯ ದೀಪವನ್ನು ಆರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಪಟ್ಟಣದ ಸಂತೆ ಮೈದಾನದಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ, ಶಿಗ್ಗಾಂವಿ ಪುರಸಭೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಒಕ್ಕೂಟಗಳ ಆಶ್ರಯದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್‌ ಅವರು ನಾಡಿಗೆ ಸಮಾನತೆಯ ಸಂದೇಶ ಸಾರಿದವರು, ಅವರ ನಡೆದು ಬಂದ ದಾರಿಯನ್ನು ನಮ್ಮ ಮಕ್ಕಳಿಗೆ ತಿಳಿಸಬೇಕು. ಮನೆ ಮನೆಗೆ ಅವರು ಬರೆದ ಪುಸ್ತಕಗಳನ್ನು ಮುಟ್ಟಿಸುವ ಕೆಲಸ ಮಾಡಬೇಕು. ಡಾ. ಬಿ. ಆರ್. ಅಂಬೇಡ್ಕರ್‌ ಹಾಗೂ ಡಾ. ಬಾಬು ಜಗಜೀವನರಾಂ ಈ ಇಬ್ಬರು ಮಹನೀಯವರು ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಡಾ. ಶೇಖರ ಸಜ್ಜನ, ಬೆಂಗಳೂರ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಭವಾನಿ, ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಡಾ. ಬಾಬು ಜಗಜೀವನರಾಂ ಅವರ ಕುರಿತು ಉಪನ್ಯಾಸ ನೀಡಿದರು.

ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಇದಕ್ಕೂ ಮೊದಲು ಪಟ್ಟಣದ ಮಿನಿ ಅಂಬೇಡ್ಕರ್‌ ಭವನದಿಂದ ಡಾ. ಬಿ.ಆರ್. ಅಂಬೇಡ್ಕರ್‌ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯ ವೈಭವಗಳೊಂದಿಗೆ ಪ್ರಾರಂಭವಾಗಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸಂತೆ ಮೈದಾನದಲ್ಲಿ ಸಮಾಪ್ತಿಗೊಂಡಿತು.

ತಹಸೀಲ್ದಾರ್‌ ಯಲ್ಲಪ್ಪ ಗೋಣೆಣ್ಣನವರ, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳಾದ ಮಂಜುನಾಥ ಸಾಳುಂಕೆ, ವಿ.ಎಸ್. ಹಿರೇಮಠ, ಅನಿಲಕುಮಾರ ರಾಠೋಡ, ಮಲ್ಲೇಶ ಆರ್., ಸರಸ್ವತಿ ಗಜಕೋಶ, ಮುಖಂಡರಾದ ಕರೆಪ್ಪ ಕಟ್ಟಿಮನಿ, ಎಸ್.ಎಫ್. ಮಣಕಟ್ಟಿ, ನಿಲವ್ವ ಕಾಲವಾಡ, ಹನುಮಂತಪ್ಪ ಬಂಡಿವಡ್ಡರ, ಗುಡ್ಡಪ್ಪ ಜಲದಿ, ಅಶೋಕ ಕಾಳೆ, ಭೀಮಣ್ಣ ಹೊಟ್ಟುರು, ಮಜೀದ ಮಾಳಗಿಮನಿ, ಅರುಣ ಹುಡೇದಗೌಡ್ರ, ಮಲ್ಲೇಶಪ್ಪ ಹರಿಜನ, ಬಾಬರ ಬಾವೋಜಿ, ಬಸವರಾಜ ಜಕ್ಕನಕಟ್ಟಿ, ಬಸಲಿಂಗಪ್ಪ ನರಗುಂದ ಫೀರಸಾಬ್ ನದಾಫ್‌, ಗದೀಗೆಪ್ಪ ಓಲೇಕಾರ, ಪ್ರಮೊದ ಚಲವಾದಿ ಮುನ್ನಾ ಲಕ್ಷ್ಮೇಶ್ವರ, ಮಂಜುನಾಥ ಬ್ಯಾಹಟ್ಟಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲೆ, ಸಂಸ್ಕೃತಿ ಉಳಿಸುವ ಜವಾಬ್ದಾರಿ ನಮ್ಮದು: ಚಂದ್ರಶೇಖರ ನರಸಿಂಹ ಹೆಗಡೆ
ಕಾಟಾಚಾರಕ್ಕೆ ಮರುಪರಿಶೀಲನೆ ಪ್ರಕ್ರಿಯೆ: ಡಾ. ನಾಗೇಶ ನಾಯ್ಕ ಕಾಗಾಲ ಆರೋಪ