ಸಮಾನತೆ ಹರಿಕಾರ ಡಾ.ಅಂಬೇಡ್ಕರ: ಡಾ.ಗಾಳಿ

KannadaprabhaNewsNetwork |  
Published : Apr 15, 2026, 03:00 AM IST
ಫೋಟೊಬಿಕೆಟಿ3, ನವನಗರದ ಸರ್ಕಾರಿ ಪ್ರಥಮ ದರ್ಜೆಕಾಲೇಜಿನಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬಾ ಸಾಹೇಬ್ ಡಾ.ಅಂಬೇಡ್ಕರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಡಾ.ಅಂಬೇಡ್ಕರ್‌ ಅವರು ಭಾರತದ ಆಸ್ತಿಯಾಗಿದ್ದು, ಅವರ ಸಾಮಾಜಿಕ ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಡಾ.ಅಂಬೇಡ್ಕರ್‌ ಅವರು ಸಮಾನತೆಯ ಹರಿಕಾರರಾಗಿದ್ದಾರೆ ಎಂದು ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸಂವಿಧಾನ ಶಿಲ್ಪಿ ಬಾಬಾಸಾಹೇಬ ಡಾ.ಅಂಬೇಡ್ಕರ್‌ ಅವರು ಭಾರತದ ಆಸ್ತಿಯಾಗಿದ್ದು, ಅವರ ಸಾಮಾಜಿಕ ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಡಾ.ಅಂಬೇಡ್ಕರ್‌ ಅವರು ಸಮಾನತೆಯ ಹರಿಕಾರರಾಗಿದ್ದಾರೆ ಎಂದು ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬಾ ಸಾಹೇಬ್ ಡಾ.ಅಂಬೇಡ್ಕರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿ ಮಾತನಾಡಿದರು.

ಪ್ರಪಂಚದಲ್ಲಿಯೇ ನಮ್ಮ ಭಾರತದ ಸಂವಿಧಾನವು ಸರ್ವಶ್ರೇಷ್ಠವಾಗಿದೆ. ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ಘನವಾದ ವ್ಯಕ್ತಿತ್ವ, ಅವರ ಸರಳತೆಯ ಬದುಕು, ದಿವ್ಯ ಪಾಂಡಿತ್ಯ ಭಾರತೀಯರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಿವೆ. ಡಾ.ಅಂಬೇಡ್ಕರ ಅವರ ಚಿಂತನೆಗಳಲ್ಲಿರುವ ಸಾಮಾಜಿಕ ಸಮಾನತೆಯ ಮೌಲ್ಯಗಳು ನಮ್ಮ ಪ್ರಜಾಪ್ರಭುತ್ವದ ಘನತೆ ಮತ್ತು ಗೌರವ ಹೆಚ್ಚಿಸಿವೆ. ಅವರ ಹೇಳಿರುವ ಮಾನವತಾವಾದ ಮೌಲ್ಯಗಳನ್ನು ಸಮ ಸಮಾಜದ ಸುಧಾರಣೆಯಲ್ಲಿ ಮಹತ್ವ ಪಡೆದುಕೊಂಡಿವೆ. ಡಾ.ಅಂಬೇಡ್ಕರ್‌ ಅವರು ಭಾರತ ಸಂವಿಧಾನದ ಧ್ರುವತಾರೆಯಾಗಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ನಿಭಾಯಿಸಲಾಗದೇ ಕಾಂಗ್ರೆಸ್ ಹೆಣಗಾಟ
ಎಲ್ಲರೂ ಮಹಾತ್ಮರ ಜಯಂತಿ ಆಚರಣೆ ಉದ್ದೇಶ ತಿಳಿಯಿರಿ