ಡಾ. ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಿಸಿ-ಸಚಿವ ಎಚ್‌.ಕೆ. ಪಾಟೀಲ

KannadaprabhaNewsNetwork |  
Published : Apr 09, 2025, 12:30 AM IST
ಸಭೆಯನ್ನು ಉದ್ದೇಶಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿದರು.  | Kannada Prabha

ಸಾರಾಂಶ

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಗದಗ: ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಅವರು ಸೋಮವಾರ ರಾತ್ರಿ ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 118ನೇ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆಯ ಪ್ರಯುಕ್ತ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ನಿಗಾ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಅಚ್ಚುಕಟ್ಟಾಗಿ ಜಯಂತಿ ಕಾರ್ಯಕ್ರಮ ಆಚರಿಸಲು ಕ್ರಮ ವಹಿಸಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಮ್ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಏಪ್ರಿಲ್ 14ರಂದು ಬೆ 11 ಗಂಟೆಗೆ ನಗರದ ಅಂಬೇಡ್ಕರ್ ಸಮುದಯ ಭವನದಲ್ಲಿ ಜರುಗಿಸಲಾಗುವುದು. ಜಯಂತಿ ನಿಮಿತ್ತ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕವನ ಸಂಕಲನ ಬಿಡುಗಡೆ ಮಾಡಲಾಗುವುದು ಎಂದರು. ವೇದಿಕೆ ಕಾರ್ಯಕ್ರಮಕ್ಕೂ ಜಯಂತಿ ನಿಮಿತ್ತ ಮೆರವಣಿಗೆಯು ಗದಗ ಬೆಟಗೇರಿ ನಗರಸಭೆ ಆವರಣದಿಂದ ವಿವಿಧ ಕಲಾ ತಂಡಗಳೊಂದಿಗೆ ಸಂಘಟನೆಗಳೊಂದಿಗೆ ನಗರದ ವಿವಿಧೆಡೆ ಸಂಚರಿಸಿ ಕಾರ್ಯಕ್ರಮದ ಸ್ಥಳಕ್ಕೆ ಬಂದು ಸೇರುವುದು. ಜಯಂತಿ ಕುರಿತು ವಿವಿಧೆಡೆ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಲಾಗಿದೆ. ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಉಪನ್ಯಾಸಕರ ಆಯ್ಕೆ ಸೇರಿದಂತೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದರು. ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಸಿಇಓ ಭರತ್ ಎಸ್, ಎಸ್ಪಿ ಬಿ.ಎಸ್.ನೇಮಗೌಡ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಭೂ ದಾಖಲೆಗಳ ಇಲಾಖೆ ಅಧಿಕಾರಿ ರುದ್ರಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ