ಪುತ್ತೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ.ಶಿವರಾಮ ಕಾರಂತ ಅವರ ೧೨೪ನೇ ವರ್ಷದ ಜನ್ಮದಿನಾಚರಣೆ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.೧೦ರಂದು ಪುತ್ತೂರಿನ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ೨೦೨೪ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ ೨೦೨೫ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಿದ್ದಾಂತಿ ಪುತ್ತೂರಿನ ಮಕ್ಕಳ ಮಂಟಪದ ರೂವಾರಿ ಡಾ.ಎನ್. ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ಆಯುಕ್ತರ ಕಚೇರಿ ಹಾಗೂ ಡಾ.ಕೋಟ ಶಿವರಾಮ ಕಾರಂತ ಬಾಲವನ ಸಮಿತಿ ಆಶ್ರಯದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ ದಿನವಿಡೀ ಕಾರ್ಯಕ್ರಮ ನಡೆಯಲಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್ ತಂಗಡಗಿ ಪ್ರಶಸ್ತಿ ಪ್ರದಾನ ನಡೆಸಲಿದ್ದಾರೆ. ಹಿರಿಯ ಸಾಹಿತಿ ಹಾಗೂ ಕಾರಂತರ ಸಹೋದರ ಸಂಬಂಧಿ ಎಂ.ಶಾಂತಾರಾಮ ರಾವ್ ಕಾರಂತ ಸ್ಮರಣೆ ಮಾಡಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಾ.ವಿರೇಂದ್ರ ಹೆಗ್ಗಡೆ, ಶಾಸಕರಾದ ವೇದವ್ಯಾಸ್ ಕಾಮತ್, ವೈ.ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ತುಳು ಅಕಾಡೆಮಿ ಅಧ್ಯಕ್ಷ ತಾರನಾಥ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾಲಿ ಬಿಲ್ವಾರಿಸ್, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಲ ನಾರಾಯಣ ರಾವ್, ರಾಜ್ಯ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಎಂ.ಎಚ್ ರೇವಣ್ಣ, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಪುತ್ತೂರು ಪುಡಾ ಅಧ್ಯಕ್ಷ ರಾಮಚಂದ್ರ ಅಮಳ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಶ್ರೀನಾಥ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.ಸಾಂಸ್ಕೃತಿಕ ಸಂಭ್ರಮ:ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ೯.೩೦ ರಿಂದ ಕಾರಂತ ನೃತ್ಯ ನಮನ ವಿಶ್ವಕಲಾನಿಕೇತನ ತಂಡದಿಂದ ಭರತನಾಟ್ಯ, ೧೦.೩೦ರಿಂದ ಕಾರಂತ ಸ್ಮರಣೆ-ಪ್ರಶಸ್ತಿ ಪ್ರದಾನ, ಅಪರಾಹ್ನ ೨ರಿಂದ ಕಾರಂತರಿಗೆ ಯಕ್ಷನಮನ ಆಂಜನೇಯ ಮಹಿಳಾ ಯಕ್ಷಗಾನ ತಂಡದಿಂದ ಶ್ರೀರಾಮ ನಿರ್ಯಾಣ ತಾಳಮದ್ದಲೆ, ೬ರಿಂದ ಕಾರಂತ ರಂಗನಮನ ಡಾ.ಕಾರಂತ ರಚನೆಯ ಸೋಮಿಯ ಸೌಭಾಗ್ಯ ಗೀತನಾಟಕ ನಡೆಯಲಿದೆ. ಕಾರ್ಯಕ್ರಮ ರಾತ್ರಿ ೮.೩೦ ತನಕ ನಡೆಯಲಿದೆ ಎಂದರು.ಸುದ್ಧಿಗೋಷ್ಠಿಯಲ್ಲಿ ಕಸಪಾ ಪುತ್ತೂರು ಘಟಕಾಧ್ಯಕ್ಷ ಉಮೇಶ್ ನಾಯಕ್ ಪುತ್ತೂರು, ಕಾರ್ಯಕ್ರಮ ಸಂಯೋಜಕರಾದ ಜಗನ್ನಾಥ ಅರಿಯಡ್ಕ ಮತ್ತು ರಮೇಶ್ ಉಳಯ ಉಪಸ್ಥಿತರಿದ್ದರು.