ಡಾ.ಬಿ.ಆರ್.ಅಂಬೇಡ್ಕರ್ ತತ್ತಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ವಸಂತ್ ಕುಮಾರ್

KannadaprabhaNewsNetwork |  
Published : May 03, 2026, 02:00 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕುಃ  ವಸಂತ್ ಕುಮಾರ್  | Kannada Prabha

ಸಾರಾಂಶ

ತರೀಕೆರೆಸಮಾನತೆಗೆ ಹೋರಾಡಿದ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ತರೀಕೆರೆ ತಾಲೂಕು ಸಂಚಾಲಕ ವಸಂತ್ ಕುಮಾರ್ ಕರೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಹಾಗೂ ಆದರ್ಶಗಳನ್ನುಕನ್ನಡಪ್ರಭ ವಾರ್ತೆ ತರೀಕೆರೆ

ಸಮಾನತೆಗೆ ಹೋರಾಡಿದ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ತರೀಕೆರೆ ತಾಲೂಕು ಸಂಚಾಲಕ ವಸಂತ್ ಕುಮಾರ್ ಕರೆ ನೀಡಿದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿಯಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬಾಬಾ ಸಾಹೇಬ್ ಡಾ.ಬಿ.ಆರ್.ಆಂಬೇಡ್ಕರ್ ಬರವಣಿಗೆಯನ್ನು ಅರ್ಥೈಸಿ ಕೊಂಡರೆ ಅವರನ್ನು ಜೀವಂತ ವಾಗಿಟ್ಟಂತೆ ಎಂದು ಹೇಳಿದರು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗಪ್ಪ ಡಾ.ಬಿ.ಆರ್. ಅಂಬೇಡ್ಕರ್ ಭಾರತಕ್ಕೆ ಮಹಾನ್ ಸಂವಿಧಾನ ನೀಡಿ ಎಲ್ಲರಿಗೂ ನ್ಯಾಯ ಒದಗಿಸುವ ಶ್ರೇಷ್ಠ ಗ್ರಂಥ ನೀಡಿದ್ದಾರೆ ಅದನ್ನು ಕಾಪಾಡಿ ಕೊಂಡು ಬರುವುದು ನಮ್ಮೆಲ್ಲರ ಕರ್ತವ್ಯ. ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಇಂತಹ ಕಾರ್ಯಕ್ರಮ ಮಾಡಿದಾಗ ಅಂಬೇಡ್ಕರ್ ಅವರನ್ನು ಜೀವಂತವಾಗಿಡಲು ಸಾಧ್ಯ ಎಂದು ಹೇಳಿದರು. ಉಪನ್ಯಾಸ ನೀಡಿದ ಶ್ರೀನಿವಾಸ್ ಕಂದೆಗಾಲ ಮೈಸೂರು ಮಾತನಾಡಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳು ಇಂದಿಗೂ ದಾರಿದೀಪ. ಅಂದ ಶ್ರದ್ಧೆ ತೊರೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಕರೆ ನೀಡಿದ ಅವರು ಬುದ್ಧ ,ಬಸವ, ಡಾ.ಬಿ.ಆರ್. ಅಂಬೇಡ್ಕರ್ ತತ್ವಗಳನ್ನು ಮುಂದಿನ ಪೀಳಿಗೆಗೆ ಸಾರುವುದು ನಮ್ಮ ಕರ್ತವ್ಯ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಒಂದು ವಿಶ್ವಕೋಶವಿದ್ದಂತೆ ಅವರ ಬಗ್ಗೆ 5-10 ನಿಮಿಷಗಳಲ್ಲಿ ಮಾತನಾಡುವುದು ಅಸಾಧ್ಯ ಎಂದರು.

ಜಿಲ್ಲಾ ಸಂಚಾಲಕ ವಿರೂಪಾಕ್ಷಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರ ಸಂಘಟನಾ ಸಂಚಾಲಕ ಪ್ರವೀಣ್, ರೈತ ಮುಖಂಡ ಕೃಷ್ಣಪ್ಪ, ರಾಜ್ಯ ಮಾನವ ಹಕ್ಕು ಆಯೋಗದ ತಾಲೂಕು ಅಧ್ಯಕ್ಷ ಜಯಸ್ವಾಮಿ ಕಾರೆ, ಗುತ್ತಿಗೆದಾರ ಬಸವರಾಜು ಟಿ.ಎಂ. ಸ್ಲಂ ಬೋರ್ಡ್ ಎಂಜಿನಿಯರ್ ಯಶವಂತ್, ಉಪನ್ಯಾಸಕ ರಂಗನಾಥ್, ಮಮತಾ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಮಂಜುಳಾ ಹಾಗೂ ತರೀಕೆರೆ ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು. -

1ಕೆಟಿಆರ್.ಕೆ.12ಃ

ತರೀಕೆರೆಯಲ್ಲಿ ದಸಂಸ ತಾಲೂಕು ಸಮಿತಿಯಿಂದ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯಲ್ಲಿ

ತಾಲೂಕು ಸಂಚಾಲಕ ವಸಂತ್ ಕುಮಾರ್ , ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗಪ್ಪ, ಜಿಲ್ಲಾ ಸಂಚಾಲಕ ವಿರೂಪಾಕ್ಷಪ್ಪ ಮತ್ತಿತರರು ಭಾಗವಹಿಸಿದ್ದರು.

.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ
ಏರುತ್ತಿದೆ ತಾಪಮಾನ: ಹೀಟ್‌ಸ್ಟ್ರೋಕ್‌ ವಾರ್ಡ್‌ ಸ್ಥಾಪನೆ!