ಡಾ. ಬಾಬೂಜಿ, ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಲಿ: ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Apr 02, 2025, 01:00 AM IST
ಡಾ.ಬಾಬು ಜಗಜೀವನ ರಾಮ್ ಮತ್ತು ಡಾ ಅಂಬೇಡ್ಕರ್ ಜಯಂತಿ ಪೂರ್ವ ಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಏ. 5ರಂದು ಡಾ. ಬಾಬು ಜಗಜೀವನ ರಾಮ್ ಮತ್ತು ಏ. 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಕಾರವಾರ: ಜಿಲ್ಲೆಯಲ್ಲಿ ಏ. 5ರಂದು ಡಾ. ಬಾಬು ಜಗಜೀವನ ರಾಮ್ ಮತ್ತು ಏ. 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ. ಬಾಬು ಜಗಜೀವನ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವರ ಭಾವಚಿತ್ರಗಳಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಲಾರ್ಪಣೆ, ಪುಷ್ಪನಮನ ಮತ್ತು ಪೂಜೆ ಸಲ್ಲಿಸಿ, ಭಾವಚಿತ್ರಗಳನ್ನು ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯ ಮೆರವಣಿಗೆ ನಡೆಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾತಂಡಗಳನ್ನು ಪ್ರಾಯೋಜಿಸುವಂತೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರಿಂದ ಕುಂಭಮೇಳದ ಮೆರವಣಿಗೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಡಾ. ಬಾಬು ಜಗಜೀವನ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪ.ಜಾತಿ ಮತ್ತು ಪ. ಪಂಗಡದ ಪ್ರತಿಭಾನ್ವಿತರಿಗೆ, ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಬೇಕು. ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಪೊಲೀಸ್ ಇಲಾಖೆ ವತಿಯಿಂದ ಮೆರವಣಿಗೆಗೆ ಸೂಕ್ತ ಪೊಲೀಸ್ ಭದ್ರತೆ ಮತ್ತು ಪೊಲೀಸ್ ಬ್ಯಾಂಡ್ ಒದಗಿಸಬೇಕು ಎಂದರು.

ಉಪ ವಿಭಾಗಾಧಿಕಾರಿ ಕನಿಷ್ಕ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ್, ದೀಪಕ ಕುಡಾಳಕರ, ಹನುಮಂತ ತಳವಾರ್, ಮಾಲಾ ಹುಲಸ್ವಾರ, ಶ್ಯಾಮ್ ಸುಂದರ ಗೋಕರ್ಣ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ