ಕಾರ್ಮಿಕರಿಗೆ ಆರ್ಥಿಕ ಬಲ ತುಂಬಿದ ಡಾ.ಬಾಬು ಜಗಜೀವನ್‌ ರಾಂ

KannadaprabhaNewsNetwork |  
Published : Apr 06, 2024, 12:47 AM IST
೫ಕೆಎಂಎನ್‌ಡಿ-೩ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಂ ೧೧೭ ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಿಸಲು ಹಲವಾರು ಕಾಯ್ದೆಯನ್ನು ಜಗಜೀವನ್‌ರಾಂ ಅವರು ಜಾರಿಗೆ ತಂದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಜಗಜೀವನ ರಾಂ ಅವರು ಬಡತನದ ತೊಂದರೆಗಳನ್ನು ಹತ್ತಿರದಿಂದ ಅರಿತಿದ್ದರು. ಆರ್ಥಿಕ ಅಸಮಾನತೆ, ಅಸ್ಪಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಭಾರತದಲ್ಲಿ ಬಹಳಷ್ಟು ಜನರು ಕಾರ್ಮಿಕ ವರ್ಗಕ್ಕೆ ಸೇರಿದವರಾಗಿದ್ದು, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಮೊದಲ ಬಾರಿಗೆ ಎಂಪ್ಲಾಯ್ ಪ್ರಾವಿಡೆಂಟ್ ಫಂಡ್ ಎಂಬ ಪರಿಕಲ್ಪನೆಯನ್ನು ಡಾ: ಬಾಬು ಜಗಜೀವನರಾಂ ಅವರು ಜಾರಿಗೆ ತಂದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ೧೧೭ ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಿಸಲು ಹಲವಾರು ಕಾಯ್ದೆ ಜಾರಿಗೆ ತಂದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಜಗಜೀವನ ರಾಂ ಅವರು ಬಡತನದ ತೊಂದರೆಗಳನ್ನು ಹತ್ತಿರದಿಂದ ಅರಿತಿದ್ದರು. ಆರ್ಥಿಕ ಅಸಮಾನತೆ, ಅಸ್ಪಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದರು ಎಂದು ತಿಳಿಸಿದರು.

ಮಂಡ್ಯ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಸ್.ಮಂಜು ಮಾತನಾಡಿ, ಭ್ರಷ್ಟಾಚಾರ ಕಳಂಕ ಅಂಟಿಸಿಕೊಳ್ಳದಂತಹ ಶುದ್ಧ ಚಾರಿತ್ರ್ಯ, ದೇಶದ ಪ್ರಗತಿ ನಮ್ಮ ಕೈಯಲ್ಲಿದೆ. ಅದರ ಉದ್ಧಾರವೇ ನಮ್ಮ ಆತ್ಮೋದ್ಧಾರ, ದೇಶದ ಅಭಿವೃದ್ಧಿಯೇ ನಮ್ಮ ಗುರಿಯಾಗಬೇಕು ಎಂಬ ಸಂದೇಶವನ್ನು ಸಾರಿದ ಮಹಾನ್ ಧೀಮಂತ ನಾಯಕ ಬಾಬು ಜಗಜೀವನರಾಂ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಕಾವೇರಿ ವನದಲ್ಲಿರುವ ಡಾ. ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್ ಉಪಸ್ಥಿತರಿದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ