ಕನ್ನಡಪ್ರಭ ವಾರ್ತೆ ಸಿಂದಗಿ
ಡಾ.ಬಾಬು ಜಗಜೀವನರಾಮ್ ಅವರು ನಡೆದು ಬಂದ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು. ಅವರ ಆದರ್ಶ, ತತ್ವ, ಸಿದ್ಧಾಂತಗಳನ್ನು ಈಗಿನ ಯುವಕರು ಮೈಗೂಡಿಸಿಕೊಳ್ಳುವ ಮೂಲಕ ಅವರನ್ನು ಸ್ಮರಿಸಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಇಂದ್ರಾಬಾಯಿ ಬಳಗಾನೂರ ಹೇಳಿದರು.ಪಟ್ಟಣದ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದೇಶಕ್ಕೆ ತಮ್ಮ ಜೀವನವನ್ನು ತ್ಯಾಗ ಮಾಡಿದ ಎಲ್ಲಾ ಮಹನೀಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು.
ಈ ವೇಳೆ ಕರ್ನಾಟಕ ಆದಿಜಾಂಬವ ಜನಸಂಘದ ಉತ್ತರ ಕರ್ನಾಟಕ ವಲಯಾಧ್ಯಕ್ಷ ಸಾಯಬಣ್ಣ ದೇವರಮನಿ ಮಾತನಾಡಿ, ನೆಹರು ಅವರ ಸಂಪುಟದಲ್ಲಿ ಕೃಷಿ, ಆಹಾರ, ರೈಲ್ವೆ, ಸಾರಿಗೆ ಹಾಗೂ ಸಮುದಾಯ ಅಭಿವೃದ್ಧಿ, ಕಾರ್ಮಿಕ ಉದ್ಯೋಗಕ್ಕಾಗಿ ಹೆಚ್ಚು ಗಮನವಿಟ್ಟು ಶ್ರಮಿಸಿದರು ಎಂದರು.ಈ ವೇಳೆ ಜಿ.ಎಸ್.ರೋಡಗಿ, ಏಕನಾಥ ದಾಶ್ಯಾಳ, ರಾಜಕುಮಾರ ಭಾಸಗಿ, ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಡಾ.ಬಾಬು ಜಗಜೀವನ್‌ರಾಮ್ ಅವರ ಜಯಂತಿ ಆಚರಣೆ ಮಾಡಲಾಯಿತು. ಈ ವೇಳೆ ಸಿಡಿಪಿಒ ಶಂಭುಲಿಂಗ ಹಿರೇಮಠ ಡಾ.ಬಾಬು ಜಗಜೀವನ್‌ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯಲ್ಲಿ ಎಸಿಡಿಪಿಒಎಸ್.ಎನ್.ಕೋರವಾರ, ವಿಜಯಕುಮಾರ ಸೇರಿದಂತೆ ಮೇಲ್ವೀಚಾರಕಿಯರು ಇದ್ದರು.ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಡಾ.ಬಾಬು ಜಗಜೀವನ್‌ರಾಮ್ ಅವರ ಜಯಂತಿ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಉಮೇಶ ಪೂಜೇರಿ, ಜಿ.ವಿ.ಪಾಟೀಲ, ಎಸ್.ಎಮ್.ಹೂಗಾರ, ಬಿ.ಬಿ.ನಂದಿಮಠ, ಎಂ.ಕೆ.ಬಿರಾದಾರ, ಎಮ್.ಎಮ್.ಈಳಗೇರ, ಎಲ್.ಎಸ್.ಗೋಗಿ, ಹೇಮಾ ಕಾಸರ, ಡಿ.ಎಂ.ಪಾಟೀಲ್. ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ, ಮಮತಾ ಹರನಾಳ ಸೇರಿದಂತೆ ಅನೇಕರಿದ್ದರು.