ಜು.6ಕ್ಕೆ ಬೆಳಗಾವಿಗೆ ಡಾ.ಭಾಗವತರ ಆಗಮನ

KannadaprabhaNewsNetwork |  
Published : Jul 02, 2026, 04:15 AM IST
ಮೋಹನ ಭಾಗವತರ | Kannada Prabha

ಸಾರಾಂಶ

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಯು ಜು.10, 11 ಹಾಗೂ 12 ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ಈ ಸಭೆಯ ನಿಮಿತ್ತ ಜು.6 ರಂದು ಬೆಳಗಾವಿಗೆ ಸರಸಂಘಚಾಲಕರಾದ ಡಾ.ಮೋಹನ ಭಾಗವತರು ಆಗಮಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಯು ಜು.10, 11 ಹಾಗೂ 12 ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ಈ ಸಭೆಯ ನಿಮಿತ್ತ ಜು.6 ರಂದು ಬೆಳಗಾವಿಗೆ ಸರಸಂಘಚಾಲಕರಾದ ಡಾ.ಮೋಹನ ಭಾಗವತರು ಆಗಮಿಸಲಿದ್ದಾರೆ.

ಸಭೆಯಲ್ಲಿ ದೇಶದಾದ್ಯಂತದ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ. ಸಂಘದ ಸಂಘಟನಾ ವ್ಯವಸ್ಥೆಯಂತೆ ದೇಶದ 11 ಕ್ಷೇತ್ರಗಳು ಹಾಗೂ 46 ಪ್ರಾಂತಗಳಿಂದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದರೊಂದಿಗೆ ಸಂಘಪ್ರೇರಿತ 32 ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಮಂತ್ರಿಗಳು ಸಹ ಸಭೆಯಲ್ಲಿ ಉಪಸ್ಥಿತರಿರುತ್ತಾರೆ. 2026ರ ಮಾರ್ಚ್ ತಿಂಗಳಲ್ಲಿ ಹರಿಯಾಣದ ಸಮಾಲ್ಖಾದಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ನಂತರ, ಏಪ್ರಿಲ್, ಮೇ ಹಾಗೂ ಜೂನ್ ತಿಂಗಳುಗಳಲ್ಲಿ ದೇಶದಾದ್ಯಂತ ವಿವಿಧ ಹಂತಗಳ ಸಂಘ ಶಿಕ್ಷಣ ವರ್ಗಗಳು ಯಶಸ್ವಿಯಾಗಿ ನಡೆದವು. ಈ ಸಭೆಯಲ್ಲಿ ಶಾಖಾಮಟ್ಟದಲ್ಲಿ ವಾರ್ಷಿಕ ಕಾರ್ಯ ಯೋಜನೆಯ ಅನುಷ್ಠಾನದ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಯಲಿದೆ. ಸಂಘ ಶತಾಬ್ದಿ ವರ್ಷದ ಅಂಗವಾಗಿ ನಡೆದಿರುವ ಶಾಖಾ ಕಾರ್ಯದ ವಿಸ್ತರಣೆಯ ಪರಿಶೀಲನೆ ಹಾಗೂ ಮುಂದಿನ ದಿನಗಳಲ್ಲಿ ಶಾಖೆಗಳ ಸಂಖ್ಯೆಯನ್ನು ಇನ್ನಷ್ಟು ಗರಿಷ್ಠ ಮಟ್ಟಕ್ಕೆ ವಿಸ್ತರಿಸುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, 2026ರ ಸಂಘ ಶಿಕ್ಷಣ ವರ್ಗಗಳ ವಿಮರ್ಶೆ, ಶತಾಬ್ದಿ ವರ್ಷದಲ್ಲಿ ಪೂರ್ಣಗೊಂಡ ಕಾರ್ಯಕ್ರಮಗಳ ಅವಲೋಕನ, ಉಳಿದಿರುವ ಕಾರ್ಯಕ್ರಮಗಳ ಯೋಜನೆ ಹಾಗೂ ಪೂಜ್ಯ ಸರಸಂಘಚಾಲಕರ 2026-27ರ ಪ್ರವಾಸ ಯೋಜನೆ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಗುವುದು. ಸಂಘ ಶತಾಬ್ದಿ ವರ್ಷದ (2025–26) ಉಳಿದ ಕಾರ್ಯಕ್ರಮಗಳು 2026ರ ಅಕ್ಟೋಬರ್ 20 ರಂದು ವಿಜಯದಶಮಿಯವರೆಗೆ ಮುಂದುವರಿಯಲಿವೆ. ಸಭೆಯಲ್ಲಿ ಭಾಗವಹಿಸುವ ಪ್ರಚಾರಕರು ಪ್ರಸ್ತುತ ರಾಷ್ಟ್ರೀಯ ಪರಿಸ್ಥಿತಿ ಹಾಗೂ ಜನಗಣತಿ ಸೇರಿದಂತೆ ಸಮಕಾಲಿನ ಪ್ರಮುಖ ವಿಷಯಗಳ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದು, ಅವುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸರಸಂಘಚಾಲಕರಾದ ಡಾ.ಮೋಹನ ಭಾಗವತ, ಸರ್ಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ, ಸಹ ಸರ್ಕಾರ್ಯವಾಹರುಗಳಾದ ಡಾ.ಕೃಷ್ಣಗೋಪಾಲ, ಸಿ.ಆರ್.ಮುಕುಂದ, ಅರುಣ ಕುಮಾರ, ರಾಮದತ್ತ, ಆಲೋಕಕುಮಾರ, ಅತುಲ ಲಿಮಯೆ, ಜೊತೆಗೆ ಅಖಿಲ ಭಾರತೀಯ ಕಾರ್ಯ ವಿಭಾಗ ಪ್ರಮುಖರು ಹಾಗೂ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖರಾದ ಸುನೀಲ ಅಂಬೇಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಂಥಾಲಯ ಸಂಘದ ಚಟುವಟಿಕೆ ವಿಸ್ತರಣೆಯಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಿ
ತಾಯಿಯ ಹೆಸರಿನಲ್ಲಿ ಸಸಿ ನೆಟ್ಟು ಮಗುವಿನಂತೆ ಪೋಷಿಸಿ