11 ಕೋಟಿ ರು. ವೆಚ್ಚದಲ್ಲಿ ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ ಅಭಿವೃದ್ಧಿ

KannadaprabhaNewsNetwork |  
Published : Apr 16, 2026, 02:45 AM IST
ಶಾಸಕ ಡಾ.ಭರತ್ ಶೆಟ್ಟಿ ಸಭೆ ನಡೆಸಿದರು | Kannada Prabha

ಸಾರಾಂಶ

ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕಿಸುವ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ 11 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣವಾಗಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕಿಸುವ ಹೆದ್ದಾರಿ ಬದಿಯ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಟ್ರಕ್ ಯಾರ್ಡ್ 11 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣವಾಗಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಶಾಸಕ ಡಾ.ಭರತ್ ಶೆಟ್ಟಿ ಅವರು ಎನ್ಎಂಪಿಎಗೆ ಮನವಿ ಮಾಡಿದ ಮೇರೆಗೆ ಬಂದರು ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಕೆಐಎಡಿಬಿ ಇಲಾಖೆ, ಟ್ರಾಫಿಕ್ ಪೊಲೀಸ್ ಹಾಗೂ ಬಂದರು ಪ್ರಾಧಿಕಾರದ ಅಧಿಕಾರಿಗಳ ಜೊತೆ ಶಾಸಕರು ಸಭೆ ನಡೆಸಿದರು. ಸಭೆಯಲ್ಲಿ ಕಾಮಗಾರಿ ಅವಧಿ, ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಡೆಸಲು ಚರ್ಚೆ ನಡೆಸಲಾಯಿತು.

ಕಾಮಗಾರಿ ಸುಗಮವಾಗಿ ನಡೆಯುವ ಉದ್ದೇಶದಿಂದ ಸಂಬಂಧಿತ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲು ಪೊಲೀಸರು ಆದೇಶ ಹೊರಡಿಸಲಿದ್ದು, ಗುರುವಾರದಿಂದ ಪರ್ಯಾಯ ಸಂಚಾರ ಅವಕಾಶ ಮಾಡಿ ಕೊಡಲಾಗುವುದು. ವಿಶೇಷವಾಗಿ ಭಾರೀ ವಾಹನಗಳ ಓಡಾಟ ಹೆಚ್ಚಿರುವ ಈ ಪ್ರದೇಶದಲ್ಲಿ ಸಂಚಾರ ನಿಯಂತ್ರಣ ಕ್ರಮಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶವು ಪ್ರಮುಖ ಉದ್ಯಮ ವಲಯವಾಗಿರುವುದರಿಂದ, ದೀರ್ಘಕಾಲದಿಂದ ರಸ್ತೆ ದುರಸ್ಥಿ ಹಾಗೂ ಕಾಂಕ್ರಿಟ್‌ ನಿರ್ಮಾಣದ ಬೇಡಿಕೆ ಕೇಳಿಬರುತ್ತಿತ್ತು. ಈಗ ಕಾಮಗಾರಿ ಆರಂಭವಾಗುತ್ತಿರುವುದರಿಂದ ಸ್ಥಳೀಯ ಉದ್ಯಮಿಗಳು, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಇನ್ನು ಎರಡು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಸೂಚನೆ ನೀಡಿರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾಯ ದೇವಳಕ್ಕೆ ನೂತನ ಬ್ರಹ್ಮರಥ ಪುರಪ್ರವೇಶ
ವಿದ್ಯಾರ್ಥಿ ಜೀವನದಲ್ಲಿ ಸಮಯ ಪರಿಪಾಲನೆಗೆ ಮಹತ್ವ: ಪ್ರೊ. ಹರೀಶ್ ಆಚಾರ್ಯ