ಕನ್ನಡಪ್ರಭ ವಾರ್ತೆ ಭಾಲ್ಕಿ
ಪಟ್ಟಣದ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಕಳೆದ ಎರಡ್ಮೂರು ದಿನಗಳಿಗೆ ಹೋಲಿಸಿದರೆ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಸಿರಾಟದ ಮಟ್ಟ ಏರಿಕೆಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿವಿಧ ಮಠಾಧೀಶರ ಭೇಟಿ :ಖಂಡ್ರೆ ನಿವಾಸಕ್ಕೆ ವಿವಿಧ ಮಠಾಧೀಶರು, ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಬೀದರಿನ ಸಿದ್ಧಾರೂಢ ಮಠದ ಶಿವಕುಮಾರ ಶ್ರೀಗಳು, ಗುರುಬಸವ ಪಟ್ಟದ್ದೇವರು, ಗದಗ ಜಿಲ್ಲೆಯ ಬಾಳೆ ಹೊಸೂರ ಮಠದ ದಿಂಗಾಲೇಶ್ವರ ಸ್ವಾಮೀಜಿ, ಹಾರಕೂಡದ ಚೆನ್ನವೀರ ಶಿವಾಚಾರ್ಯರು, ಮುಗುಳಖೋಡ ಶ್ರೀಗಳು, ಹುಡುಗಿ ಶ್ರೀಗಳು, ಹಣೆಗಾಂವ ಶ್ರೀಗಳು, ಹಾರಕೂಡ ಚೆನ್ನವೀರ ಶಿವಾಚಾರ್ಯರು, ಸೇರಿದಂತೆ ಅಫಜಲಪೂರ ಶಾಸಕ ಎಂ. ವೈ.ಪಾಟೀಲ್, ಹಿರಿಯ ಮುಖಂಡ ಗುರುನಾಥ ಕೊಳ್ಳುರು, ಡಿ.ಕೆ.ಸಿದ್ರಾಮ ಸೇರಿದಂತೆ ಮುಂತಾದವರು ಭೇಟಿ ನೀಡಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖ ಹೊಂದಲಿ ಎಂದು ಪ್ರಾರ್ಥಿಸಿದರು.
---
ನಮ್ಮ ತಂದೆ ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೂಡಬಾರದು. ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನಮ್ಮ ತಂದೆಯ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಬೇಕು.ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ