ಡಾ. ಬಿ.ಆರ್. ಅಂಬೇಡ್ಕರ್ ವಿಶ್ವದ ಮಹಾನ್ ನಾಯಕ-ಪ್ರಸಾದ ಅಬ್ಬಯ್ಯ

KannadaprabhaNewsNetwork |  
Published : Apr 15, 2025, 12:49 AM IST
ಡಾ. ಬಿ.ಆರ್. ಜಯಂತಿ ಕಾರ್ಯಕ್ರಮಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿದರು. | Kannada Prabha

ಸಾರಾಂಶ

ಡಾ. ಬಿ.ಆರ್. ಅಂಬೇಡ್ಕರ್ ಒಂದೇ ಜಾತಿಗೆ ಮತ್ತು ಒಂದೇ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಬುದ್ಧ, ಬಸವಣ್ಣನವರ ವಿಚಾರಧಾರೆ ಹೊಂದಿದ್ದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಸಮಾನತೆ ಸಿಗಬೇಕೆಂದು ಹೋರಾಡಿದವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಒಂದೇ ಜಾತಿಗೆ ಮತ್ತು ಒಂದೇ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಬುದ್ಧ, ಬಸವಣ್ಣನವರ ವಿಚಾರಧಾರೆ ಹೊಂದಿದ್ದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಸಮಾನತೆ ಸಿಗಬೇಕೆಂದು ಹೋರಾಡಿದವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ತಾಲೂಕು ಆಡಳಿತಸೌಧದ ತಾಪಂ ಸಭಾಭವನದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಕಲಗೌಡ ಪಾಟೀಲ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಹೋರಾಡಿದರು. ಶೋಷಿತ ಜನರ ಏಳಿಗೆಗಾಗಿ ಶ್ರಮಪಟ್ಟರು. ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದರು ಎಂದರು.

ಈ ವೇಳೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರು ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ. ರಾಮಪ್ಪ ಜಂಗನವಾರಿ ಉಪನ್ಯಾಸ ನೀಡಿದರು.

ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಜೆ.ಬಿ. ಪಾಟೀಲ, ಅಪರ ತಹಸೀಲ್ದಾರ್ ಜಿ.ವಿ. ಪಾಟೀಲ, ತಾಪಂ ವ್ಯವಸ್ಥಾಪಕ ಶಿವಾನಂದ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮೀನಾಕ್ಷಿ ಗುದಗಿಯವರ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಸಮಾಜದ ಮುಖಂಡರಾದ ಗುರುನಾಥ ಉಳ್ಳಿಕಾಶಿ, ಡಾ. ಪ್ರಹ್ಲಾದ ಗೆಜ್ಜಿ, ಶೋಭಾ ಬಳ್ಳಾರಿ, ಗೌರಮ್ಮ ಹರಿಜನ, ಮಂಜುಳಾ ಬೆನಗಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ