ಕನ್ನಡಪ್ರಭ ವಾರ್ತೆ ಕುಶಾಲನಗರ
ಅರಣ್ಯ ಇಲಾಖೆ ಮತ್ತು ಕುಶಾಲನಗರ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಕುಶಾಲನಗರ ಕೊಪ್ಪ ಗಡಿ ಭಾಗದ ಪ್ರೆಶರ್ಪೆಟೆ ಸೇತುವೆ ಕಾವೇರಿ ರೋಟರಿ ಉದ್ಯಾನದಲ್ಲಿ ಸಾಲುಮರ ತಿಮ್ಮಕ್ಕ ಅವರ 115 ನೇ ಜನ್ಮದಿನದ ಅಂಗವಾಗಿ ನಡೆದ ವಿದ್ಯಾರ್ಥಿಗಳೊಂದಿಗೆ ಪರಿಸರ ಮಾಹಿತಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಶಾಸಕರ ಅನುದಾನ ಮತ್ತು ಇಲಾಖೆಯ ಮೂಲಕ ವೃಕ್ಷಮಾತೆ ಸಾಲುಮರ ತಿಮ್ಮಕ್ಕ ಅವರ ಹೆಸರಿನಲ್ಲಿ ಉದ್ಯಾನವನ ನಿರ್ಮಿಸಿ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪರಿಸರ ತಜ್ಞರಾದ ಭಜನ್ ಬೋಪಣ್ಣ ಮಾತನಾಡಿ, ಪ್ರಕೃತಿಯಲ್ಲಿ ಅಗಾಧ ಶಕ್ತಿ ಅಡಗಿದೆ. ಆರಾಧನೆ ಮೂಲಕ ಶಕ್ತಿ ಗಳಿಸಲು ಸಾಧ್ಯ ಎಂದರಲ್ಲದೆ ನದಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಪಣತೊಡಬೇಕಾಗಿದೆ ಎಂದರು.ಸಾಲುಮರ ತಿಮ್ಮಕ್ಕ ಅವರ ಸಾಧನೆ ಮತ್ತು ಅವರಿಗೆ ಲಭಿಸಿದ ಗೌರವ ಬಗ್ಗೆ ಸಾಲುಮರ ತಿಮ್ಮಕ್ಕ ಫೌಂಡೇಶನ್ ಪ್ರಶಸ್ತಿಗೆ ಭಾಜನರಾದ ಪರಿಸರ ಬಳಗದ ಸಂಚಾಲಕ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಸಮಗ್ರ ಮಾಹಿತಿ ಒದಗಿಸಿದರು.
ಭಜನ್ ಬೋಪಣ್ಣ ಅವರ ಪುತ್ರ ಇಂಡಿಯನ್ ಮೋಗ್ಲಿ ಖ್ಯಾತಿಯ ಪುಟ್ಟ ಬಾಲಕ ವಿಯಾನ್ ಬೋಪಣ್ಣ ಅವರು ಸಾಲುಮರ ತಿಮ್ಮಕ್ಕ ಅವರ ಬಗ್ಗೆ ಮಾಹಿತಿ ಉಳ್ಳ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಬಾಚಣಿಯಂಡ ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ ಉಪಸ್ಥಿತರಿದ್ದರು.
ಪತ್ರಕರ್ತ ಭೋಜನ ರೆಡ್ಡಿ ನಿರೂಪಿಸಿ ಸ್ವಾಗತಿಸಿದರು. ಕಾರ್ಯಕ್ರಮ ಆಯೋಜಕ ವನಿತಾ ಚಂದ್ರಮೋಹನ್ ವಂದಿಸಿದರು. ಧರಣಿ ಸೋಮಯ್ಯ ಪ್ರಾರ್ಥಿಸಿದರು.