ಕನ್ನಡಪ್ರಭ ವಾರ್ತೆ ಮೈಸೂರು
ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಗುರುವಾರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಂಸದ ಬಿ.ವೈ. ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇದ್ದರು.
ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್ ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಟಿಕೆಟ್ ಬಯಸಿದ್ದ ರಘುಪತಿ ಭಟ್‌ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯವಾಗಿ ಉಮೇದುವಾರಿಕೆ ಸಲ್ಲಿಸಿದರು.ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್ ಅವರು ಪಕ್ಷದ ನಾಯಕರ ಜತೆಗೂಡಿ ನಾಮಪತ್ರ ಸಲ್ಲಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್‌ಸೇಠ್‌ಮೊದಲಾದವರ ಜತೆಗೂಡಿ ಎರಡು ಸೆಟ್ ನಾಮಪತ್ರ ಸಲ್ಲಿಸಿದರು.
ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಈ ವೇಳೆಯೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್‌ಸೇಠ್ ಮೊದಲಾದವರು ಜತೆಗಿದ್ದರು.