ಡಾ.ಜಿ. ಪರಮೇಶ್ವರ್ ಜನ್ಮದಿನಾಚರಣೆ, ಅನ್ನ ದಾಸೋಹ

KannadaprabhaNewsNetwork |  
Published : Aug 07, 2025, 12:45 AM IST

ಸಾರಾಂಶ

ಕಾಂಗ್ರೆಸ್ ಒಬಿಸಿ ಘಟಕ ಜಿಲ್ಲಾಧ್ಯಕ್ಷ ಟಿ.ಎಚ್. ಅನಿಲ್‌ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸಚಿವರ ಅಭಿಮಾನಿಗಳು ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ 74ನೇ ಹುಟ್ಟು ಹಬ್ಬದ ಅಂಗವಾಗಿ ಬುಧವಾದ ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದಿಂದ ಸಾರ್ವಜನಿಕರಿಗೆ ಅನ್ನ ದಾಸೋಹ ಮಾಡಲಾಗಿತ್ತು.

ನಗರದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಎದುರು ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಒಬಿಸಿ ಘಟಕ ಜಿಲ್ಲಾಧ್ಯಕ್ಷ ಟಿ.ಎಚ್. ಅನಿಲ್‌ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸಚಿವರ ಅಭಿಮಾನಿಗಳು ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಇದಕ್ಕೂ ಮೊದಲು ಅನಿಲ್‌ಕುಮಾರ್ ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ಸಚಿವ ಡಾ.ಜಿ.ಪರಮೇಶ್ವರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭ ಪ್ರಾರ್ಥಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಒಬಿಸಿ ಘಟಕ ಜಿಲ್ಲಾಧ್ಯಕ್ಷ ಟಿ.ಎಚ್. ಅನಿಲ್‌ಕುಮಾರ್, ತುಮಕೂರನ್ನು ರಾಜಧಾನಿ ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿ ಮಾಡಬೇಕೆಂಬ ಚಿಂತನೆ ಹೊಂದಿರುವ ಸಚಿವ ಡಾ.ಪರಮೇಶ್ವರ್ ಅವರು ನಗರದಲ್ಲಿ ಅತ್ಯಾಧುನಿಕ ಕ್ರೀಡಾಂಗಣ ನಿರ್ಮಾಣ, ತುಮಕೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾಗಿದ್ದಾರೆ. ಮೈಸೂರು ದಸರಾ ಮಾದರಿಯಲ್ಲಿ ತುಮಕೂರಿನಲ್ಲಿಯೂ ದಸರಾ ಉತ್ಸವ ಆಚರಣೆಗೆ ನಾಂದಿ ಹಾಡಿದ್ದಾರೆ. ಸರ್ಕಾರದಲ್ಲಿ ವಿವಿಧ ಖಾತೆಗಳ, ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸರುವ ಡಾ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸ್ಥಾನ ಪಡೆದು ನಾಡಿಗೆ ದೊಡ್ಡ ಕೊಡುಗೆ ನೀಡಲಿ ಎಂದು ಆಶಿಸಿದರು.

ಇವರ ತಂದೆ ಎಚ್.ಎಂ. ಗಂಗಾಧರಯ್ಯನವರು ಸ್ಥಾಪನೆ ಮಾಡಿದ್ದ ಸಿದ್ಧಾರ್ಥ ಸಂಸ್ಥೆಯನ್ನು ಮತ್ತಷ್ಟು ಬೆಳೆಸಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು, ಸಂಸ್ಥೆಯಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಲು ನೆರವಾಗಿದ್ದಾರೆ. ಇಲ್ಲಿ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಆಗಿರುವ ಕಾರಣ ಸುತ್ತಮುತ್ತಲ ಪ್ರದೇಶಗಳೂ ಅಭಿವೃದ್ಧಿಯಾಗಿದೆ. ತುಮಕೂರು ನಗರ ನಾನಾ ರೀತಿಯಲ್ಲಿ ಬೆಳವಣಿಗೆಯಾಗಲು ಡಾ.ಪರಮೇಶ್ವರ್ ಅವರು ಕಾರಣಕರ್ತರಾಗಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ನ ರಾಜ್ಯ ಒಬಿಸಿ ಘಟಕ ಉಪಾಧ್ಯಕ್ಷ ಡಾ. ವಿಜಯರಾಘವೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಮಣಿ, ಚಿಕ್ಕನಾಯಕನಹಳ್ಳಿ ಮಹಿಳಾ ಒಬಿಸಿ ಘಟಕ ಅಧ್ಯಕ್ಷೆ ರಾಧಾ ವಿಜಯ್, ತುಮಕೂರು ವಿವಿ ಸಿಂಡಿಕೇಟ್ ಸದಸ್ಯೆ ಡಾ.ಫರ‍್ಹಾನಾ ಬೇಗಂ, ಒನಕೆ ಓಬವ್ವ ಸಂಘದ ಅಧ್ಯಕ್ಷೆ ಎಂ.ಆರ್.ವಿಜಯಲಕ್ಷ್ಮೀ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಸೌಭಾಗ್ಯ, ಮುಖಂಡ ಪಿ.ಶಿವಾಜಿ ಮೊದಲಾದವರು ಭಾಗವಹಿಸಿದ್ದರು.ಕ್ಯಾಪ್ಶನ್.....ತುಮಕೂರು ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದಿಂದ ಪರಮೇಶ್ವರ್ ಹುಟ್ಟುಹಬ್ಬ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ