ಐಗೂರು ಸೇತುವೆ ಕಾಮಗಾರಿ ಪರಿಶೀಲನೆ

KannadaprabhaNewsNetwork |  
Published : Jul 22, 2026, 02:45 AM IST
ಐಗೂರು ಗ್ರಾಮದ ನಿರ್ಮಾಣವಾಗುತ್ತಿರುವ ನೂತನ ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಮಂಥರ್‌ ಗೌಡ | Kannada Prabha

ಸಾರಾಂಶ

ಐಗೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶಾಸಕ ಡಾ. ಮಂತರ್ ಗೌಡ ಪರಿಶೀಲಿಸಿದರು.

ಸೋಮವಾರಪೇಟೆ: ಐಗೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶಾಸಕ ಡಾ. ಮಂತರ್ ಗೌಡ ಪರಿಶೀಲಿಸಿದರು. ಮಡಿಕೇರಿಯಿಂದ ಹಾಸನಕ್ಕೆ ತೆರಳುವ ರಾಜ್ಯ ಹೆದ್ದಾರಿಯಾಗಿರುವುದರಿಂದ ಕಾಮಗಾರಿ ಪೂರ್ಣಗೊಳ್ಳದ ಕಾರಣ ಸಮಸ್ಯೆಯಾಗಿದೆ. ಕೂಡಲೇ ಕಾಮಗಾರಿ ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಸ್ಥಳೀಯರು ಶಾಸಕರಲ್ಲಿ ಮನವಿ ಮಾಡಿದರು. ಇದೇ ಸಂದರ್ಭ ನೂರಾರು ವರ್ಷಗಳ ಇತಿಹಾಸವಿದ್ದ ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಸೇತುವೆ ತೆರವುಗೊಳಿಸಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಗುಣಮಟ್ಟದ ಕಾಮಗಾರಿಯೊಂದಿಗೆ ಶೀಘ್ರ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಇಂಜಿನಿಯರ್ ವಿಜಯಕುಮಾರ್ ಅವರಿಗೆ ಸೂಚಿಸಿದರು. ಪಾದಚಾರಿಗಳ ಮಾರ್ಗದಲ್ಲಿ ಸುರಕ್ಷಾ ಕ್ರಮ ತೆಗೆದುಕೊಳ್ಳಬೇಕು ಎಂದರು. ಈ ಹಿಂದೆ ಇದ್ದ ಕಬ್ಬಿಣ ಸೇತುವೆ ನೆನಪಿನಲ್ಲಿ ಮತ್ತು ಅದರ ಇತಿಹಾಸವನ್ನು ಪರಿಚಯಿಸುವ ವೀಕ್ಷಣಾ ಮಾದರಿಯನ್ನು ನಿರ್ಮಿಸುವ ಮೂಲಕ ಸೇತುವೆಯ ನೆನಪು ಜನರಲ್ಲಿ ಉಳಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರ್ಣಂಕಿಲ ಕ್ಷೇತ್ರದ ಮಹಾರಥ, ಅಂಗಣ ಚಪ್ಪರಕ್ಕೆ ಮುಹೂರ್ತ
ದೆಹಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ