ಸಂವಿಧಾನ ಜಾಗೃತಿ ಜಾಥಾ ಯಶಸ್ವಿ: ಪಂಜಿನ ಮೆರವಣಿಗೆ, ಮಾನವ ಪರಪಳಿ
ಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.
ತಾಲೂಕು ಅಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥದ ಸಂದರ್ಭದಲ್ಲಿ ಏರ್ಪಡಿಸಿದ್ದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.ಸಮಾನತೆಯಿಂದ ಬದುಕುವುದಕ್ಕೆ ಕಾರಣ ಸಂವಿಧಾನ. ಬಹು ದೊಡ್ಡ ರಾಷ್ಟ್ರ ಭಾರತ, ಸಂವಿಧಾನದಲ್ಲಿ ಮೂಲಬೂತ ಕರ್ತವ್ಯ ಹಕ್ಕು ಎರಡು ಇರುತ್ತದೆ. ಸಂವಿಧಾನ ನಮ್ಮ ಹೆಮ್ಮೆಯಾಗಿದೆ, ಸರ್ವಕಾಲಿಕ ಸತ್ಯವನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿದ್ದು ಜಿಲ್ಲೆಯಲ್ಲಿ ತರೀಕೆರೆ ತಾಲೂಕು ಪ್ರಥಮ ಸ್ಥಾನದಲ್ಲಿದೆ. ಸಂವಿಧಾನ ಜಾಥಾ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಕಟೇಶ್ ಮಾತನಾಡಿ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನತೆ ತೋರಿಸಲಾಗಿದೆ. ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದಾರೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಸಂವಿಧಾನದ ಮಹತ್ವ ಕೋಟ್ಯಾಂತರ ಜನರನ್ನು ತಲುಪಿದೆ ಎಂದು ಹೇಳಿದರು.ತಾಲೂಕು ಕಚೇರಿಯಿಂದ ಮಹಾತ್ಮಾಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಂತರ, ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ಏರ್ಪಡಿಸಲಾಗಿತ್ತು.ತಹಸೀಲ್ದಾರ್ ವಿ.ಎಸ್.ರಾಜೀವ್, ಪೌರಕಾರ್ಮಿಕರು, ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.24ಕೆಟಿಆರ್.ಕೆ.4ಃ