ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್ ಪರವಾಗಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ 77 ಸಚಿವರಲ್ಲಿ 27 ಒಬಿಸಿ, 12 ಪರಿಶಿಷ್ಟ ಜಾತಿ ಹಾಗೂ 8 ಪರಿಶಿಷ್ಟ ಪಂಗಡದವರಾಗಿದ್ದಾರೆ 47 ಸಚಿವರು ಅಂದರೆ ಶೇ.61ರಷ್ಟು ಸಚಿವರು ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಮೋದಿ ಅವರ ಕಾಲದಲ್ಲಿ ಹಿಂದುಳಿದವರಿಗೆ, ದಲಿತರಿಗೆ ಅಧಿಕಾರ ಸಿಕ್ಕಿದೆ ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ರಚಿತ ಸಂವಿಧಾನ 60 ವರ್ಷ ಜಮ್ಮು ಕಾಶ್ಮೀರದಲ್ಲಿ ಜಾರಿಯಾಗಿರಲಿಲ್ಲ. ಜಮ್ಮು ಕಾಶ್ಮೀರದಲ್ಲಿ ದಲಿತರಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಪ್ರಧಾನಿ ಮೋದಿಯವರು ಆರ್ಟಿಕಲ್ 370 ರದ್ದು ಮಾಡಿದ ನಂತರವೇ ಅಲ್ಲಿ ದಲಿತರಿಗೆ ಮೀಸಲಾತಿ ಸಿಕ್ಕಿದೆ. ಜೊತೆಗೆ ಮೇಲ್ಜಾತಿಯ ಬಡವರಿಗೂ ಶೇ.10 ಮೀಸಲಾತಿ ದೊರೆತಿದೆ. ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ.33 ಮೀಸಲಾತಿಯನ್ನು ಪ್ರಧಾನಿ ಮೋದಿ ನೀಡಿದ್ದಾರೆ. ತ್ರಿವಳಿ ತಲಾಖ್ ರದ್ದು ಮಾಡಿ ಬಡ ಮುಸ್ಲಿಂ ಮಹಿಳೆಯರಿಗೆ ನೆರವಾಗಿದ್ದಾರೆ ಎಂದು ಹೇಳಿದರು.ಮಾದಿಗರ ಕನಸು ನನಸಾಗಲು ಮೋದಿ ಬೇಕು:
ಸುದ್ದಿಗಾರರೊಂದಿಗೆ ಮಾತನಾಡಿದ ಅಭ್ಯರ್ಥಿ ಡಾ। ಕೆ.ಸುಧಾಕರ್, ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ-7 ರ ಬಳಿಯ ಮೈದಾನದಲ್ಲಿ ಏಪ್ರಿಲ್ 20ರಂದು ಬಿಜೆಪಿ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಸಿದ್ಧತೆ ನಡೆಯುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತರಿಗೆ ಬಹಳ ಉತ್ಸಾಹ ಬಂದಿದೆ. ಅವರ ಆಗಮನದಿಂದಾಗಿ ಚುನಾವಣೆಯ ಮೇಲೆ ದೊಡ್ಡ ಪರಿಣಾಮವಾಗಲಿದ್ದು, ನನಗೆ ಹೆಚ್ಚು ಲಾಭವಾಗಲಿದೆ ಎಂದರು.ಕಾಂಗ್ರೆಸ್ ಗೆದ್ದರೆ ಪ್ರಯೋಜವಿಲ್ಲ: ಅಶೋಕ್
ಜನರನ್ನು ನಗಿಸುವುದು ಬಹಳ ಕಷ್ಟದ ಕಲೆ. ಆದರೆ ಕಲೆಯನ್ನು ದ್ವಾರಕೀಶ್ ಕರಗತ ಮಾಡಿಕೊಂಡಿದ್ದರು. ಅವರು ದೈಹಿಕವಾಗಿ ಅಗಲಿದ್ದರೂ ಅವರ ಕಲೆಗೆ ಸಾವಿಲ್ಲ. ಅರ್ಥಗರ್ಭಿತವಾದ ಹಾಸ್ಯವನ್ನು ಹೇಗೆ ಮಾಡುತ್ತಿದ್ದರು ಎಂದು ಅವರನ್ನು ನೋಡಿ ತಿಳಿಯಬಹುದಿತ್ತು. ಯಾವಾಗಲೂ ನಮ್ಮ ಮನಸ್ಸಿನಲ್ಲೇ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಡಾ। ಕೆ.ಸುಧಾಕರ್ ಹೇಳಿದರು.