ಮಾಹೆ ಸಹಕುಲಪತಿಯಾಗಿ ಡಾ. ಕರುಣಾಕರ್ ಕೋಟೆಗಾರ್

KannadaprabhaNewsNetwork |  
Published : Jul 03, 2026, 03:00 AM IST
02ಮಾಹೆಯ ಸಹಕುಲಪತಿ ಡಾ. ಕೋಟೆಕಾರ್ ಅವರಿಗೆ ಸಹಕುಲಾಧಿಪತಿ ಡಾ. ಬಲ್ಲಾಳ್ ಅಭಿನಂದಿಸಿದರು | Kannada Prabha

ಸಾರಾಂಶ

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯದ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ.

ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯದ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಡಾ. ಕರುಣಾಕರ್ ಎ. ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ.

ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಡಾ. ನಾರಾಯಣ ಸಭಾಹಿತ್ ಅವರು ಇನ್ನು ಮುಂದೆ ವಿಶ್ವವಿದ್ಯಾಲಯದ ಸಲಹೆಗಾರರಾಗಿರುತ್ತಾರೆ.

ಉನ್ನತ ಶಿಕ್ಷಣ ಕ್ಷೇತ್ರದ ಬೋಧನೆ, ಸಂಶೋಧನೆ ಮತ್ತು ಆಡಳಿತಗಾರರಾಗಿ 29 ವರ್ಷಗಳಿಗೂ ಹೆಚ್ಚಿನ ಅನುಭವವನ್ನು ಹೊಂದಿರುವ ಡಾ. ಕೋಟೆಕಾರ್ 2024ರ ಅಕ್ಟೋಬರ್‌ನಿಂದ ಜೈಪುರದ ಮಣಿಪಾಲ್ ಕ್ಯಾಂಪಸ್‌ನಲ್ಲಿ ಪ್ರೊ-ಪ್ರೆಸಿಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ. ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಂಐಟಿ) ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಜರ್ನಲ್‌ಗಳು ಹಾಗೂ ಸಮ್ಮೇಳನಗಳಲ್ಲಿ 75ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಒಂಬತ್ತು ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ.

ಅವರು ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್‌ ಆಫ್‌ ಇಲೆಕ್ಟ್ರಿಕಲ್‌ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರ್ಸ್‌ ಸಂಸ್ಥೆಯ ಹಿರಿಯ ಸದಸ್ಯ, ಇಂಡಿಯನ್‌ ಸೊಸೈಟಿ ಫಾರ್‌ ಟೆಕ್ನಿಕಲ್‌ ಎಜುಕೇಶನ್‌ನ ಆಜೀವ ಸದಸ್ಯರಾಗಿದ್ದಾರೆ. 2020 - 2023ರವರೆಗೆ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃತ್ತಿ ಜೊತೆ ನಾಡಗೌಡರ ಸೇವೆ ಅನುಪಮ
ಯೋಗ, ಧ್ಯಾನದಿಂದ ಆರೋಗ್ಯ ವೃದ್ಧಿ