ನಾಪೋಕ್ಲು : ಕೊಡಗು ಜಿಲ್ಲೆಯಲ್ಲಿ ಕಳೆದೆರಡು ತಿಂಗಳಿನಿಂದ ತೀವ್ರ ಮಳೆ ಕೊರತೆ ಉಂಟಾಗಿದ್ದು, ಇಡೀ ಜಿಲ್ಲೆಯನ್ನುತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ50,000 ರೂಪಾಯಿ ಪರಿಹಾರ ನೀಡಬೇಕೆಂದು ಭಾರತೀಯ ಕಾಫಿ ಮಂಡಳಿಯ ಮಾಜಿ ಉಪಾಧ್ಯಕ್ಷರಾದ ಡಾ. ಕಾವೇರಪ್ಪ ಅವರು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಬತ್ತಿದ ಬಾವಿಗಳು, ಒಣಗಿದ ಭತ್ತದ ಗದ್ದೆಗಳು: ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಇಡೀ ಕೊಡಗು ಜಿಲ್ಲೆಯಲ್ಲಿ ಸೂಕ್ತ ಮಳೆಯಿಲ್ಲದೆ ಪರಿಸ್ಥಿತಿ ಆತಂಕಕಾರಿಯಾಗಿದೆ. ಕುಡಿಯುವ ನೀರಿನ ಬಾವಿಗಳು ಬತ್ತಿಹೋಗುತ್ತಿದ್ದು, ಭತ್ತದ ಗದ್ದೆಗಳು ಬಿರುಕು ಬಿಟ್ಟು ಒಣಗುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂಬರುವ ಕಾಫಿ, ಕಾಳುಮೆಣಸು, ಅಡಿಕೆ ಮತ್ತು ಏಲಕ್ಕಿ ಬೆಳೆಗಳ ಇಳುವರಿಯ ಮೇಲೆಯೂ ತೀವ್ರ ದುಷ್ಪರಿಣಾಮ ಬೀರಲಿದೆ, ಎಂದು ಅವರು ಎಚ್ಚರಿಸಿದ್ದಾರೆ.
ಕೆಆರ್‌ಎಸ್ ಜಲಾಶಯವೇ ಸಾಕ್ಷಿ: ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿರುವುದೇ ಕೊಡಗಿನಲ್ಲಿ ಮಳೆಯ ಅಭಾವ ಇರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಆದ್ದರಿಂದ, ಸರ್ಕಾರದ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ತಕ್ಷಣವೇ ಮಧ್ಯಪ್ರವೇಶಿಸಿ ಇಡೀ ಕೊಡಗು ಜಿಲ್ಲೆಯನ್ನು ''''''''''''''''ಬರಪೀಡಿತ ಪ್ರದೇಶ'''''''''''''''' ಎಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ಜಿಲ್ಲೆಯ ರೈತರನ್ನು ರಕ್ಷಿಸಲು ಪ್ರತಿ ಹೆಕ್ಟೇರ್‌ಗೆ 50,000 ರೂ. ನಷ್ಟಪರಿಹಾರ ಒದಗಿಸಬೇಕು ಎಂದು ನಾಪೋಕ್ಲುವಿನ ಡಾ. ಕಾವೇರಪ್ಪ ಅವರು ಮನವಿ ಮಾಡಿದ್ದಾರೆ.