ಕಾಸರಗೋಡಿನಲ್ಲಿ ಡಾ.ಕಯ್ಯಾರ ಕಿಞ್ಞಣ್ಣ ರೈ 110ನೇ ಜನ್ಮದಿನಾಚರಣೆ

KannadaprabhaNewsNetwork |  
Published : Jun 20, 2025, 12:35 AM IST
ಕಾಸರಗೋಡಿನಲ್ಲಿ ಡಾ.ಕಯ್ಯಾರ ಕಿಞಣ್ಣ ರೈ 110ನೇ ಜನ್ಮದಿನಾಚರಣೆ ಉದ್ಘಾಟನೆ  | Kannada Prabha

ಸಾರಾಂಶ

ಬುಧವಾರ ಕಾಸರಗೋಡಿನ ಕಯ್ಯಾರ್‌ ಜೋಡುಕಲ್ಲು ಫ್ರೆಂಡ್ಸ್‌ ಕ್ಲಬ್‌ ಸಭಾಂಗಣದಲ್ಲಿ ನಾಡೋಜ ಡಾ.ಕಯ್ಯಾರ ಕಿಞ್ಙಣ್ಣ ರೈ 110ನೇ ಜನ್ಮ ದಿನ ಆಚರಿಸಲಾಯಿತು.

ಕನ್ನಡ ನಾಮಫಲಕ ಅವಗಣನೆ ಬಗ್ಗೆ ಕಾಸರಗೋಡು ಡಿಸಿ ಭೇಟಿ ಮಾಡಿದ ಗಡಿ ಪ್ರಾಧಿಕಾರಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್‌ ಸ್ಟಾರ್‌ ಆರ್ಟ್ಸ್‌ ಮತ್ತು ಸ್ಟೋರ್ಟ್ಸ್ ಕ್ಲಬ್‌ ಕಯ್ಯಾರ 16ನೇ ವಾರ್ಡ್‌ ಕಯ್ಯಾರ ಕುಟುಂಬಶ್ರೀ ಘಟಕಗಳ ಸಹಯೋಗದಲ್ಲಿ ಬುಧವಾರ ಕಾಸರಗೋಡಿನ ಕಯ್ಯಾರ್‌ ಜೋಡುಕಲ್ಲು ಫ್ರೆಂಡ್ಸ್‌ ಕ್ಲಬ್‌ ಸಭಾಂಗಣದಲ್ಲಿ ನಾಡೋಜ ಡಾ.ಕಯ್ಯಾರ ಕಿಞ್ಙಣ್ಣ ರೈ 110ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್‌ ಕಾರ್ಯಕ್ರಮ ಉದ್ಘಾಟಿಸಿದರು.

ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಎಸ್.ಪ್ರದೀಪ್‌ ಕುಮಾರ್‌, ಜಯಪ್ರಕಾಶ್‌, ಗಡಿ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಸುಬ್ಬಯ್ಯಕಟ್ಟೆ, ಶಿವರೆಡ್ಡಿ, ಪೈವಳಿಕೆ ಗ್ರಾ.ಪಂ. ಅಧ್ಯಕ್ಷೆ ಜಯಂತಿ, ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್‌ ಮತ್ತೀಹಳ್ಳಿ ಭಾಗವಹಿಸಿದ್ದರು.

ಕನ್ನಡಕ್ಕಾಗಿ ದುಡಿದ ಪ್ರೊ. ಶ್ರೀನಾಥರವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ........................ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಅವಗಣನೆ:

ಕಾಸರಗೋಡು ಜಿಲ್ಲಾಧಿಕಾರಿ ಭೇಟಿ ಮಾಡಿದ ನಿಯೋಗ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಶೇಖರ್‌ ಅವರನ್ನು ಶಾಸಕ ಎನ್. ಎ. ನೆಲ್ಲಿಕುನ್ನು ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ತಂಡ ಭೇಟಿ ಮಾಡಿತು.

ಕಯ್ಯಾರ ಕಿಞ್ಙಣ್ಣರೈ ಕನ್ನಡ ಭವನಕ್ಕೆ ಮುಖ್ಯ ರಸ್ತೆಯಿಂದ ಹೋಗುವ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೋರಲಾಯಿತು. ಹೊಸದಾಗಿ ನಿರ್ಮಾಣವಾದ ತಳಪತಿ-ತಿರುವನಂತಪುರಂ ರಾಷ್ಟ್ರೀಯ ಹೆದ್ದಾರಿ ಕಾಸರಗೋಡು ಇಲ್ಲಿ ಬರುವ ಕನ್ನಡ ಪ್ರದೇಶಗಳ ಸ್ಥಳ ನಾಮವನ್ನು ನಾಮಫಲಕಗಳಲ್ಲಿ ಇಂಗ್ಲೀಷ್‌, ಹಿಂದಿ, ಮಲಯಾಳಿ ಜೊತೆಗೆ ಕನ್ನಡದಲ್ಲಿಯೂ ಹಾಕುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಭಾರತ ಸರ್ಕಾರದ ಭಾಷಾ ಅಲ್ಪ ಸಂಖ್ಯಾತರ ಇಲಾಖೆಯವರು ಬರೆದ ಪತ್ರದ ಪ್ರತಿಯನ್ನು ಕೂಡಾ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಯಿತು. ಕಾಸರಗೋಡು ಜಿಲ್ಲೆಯ ವಿವಿಧ ರೈಲು ನಿಲ್ದಾಣಗಳಲ್ಲಿ ಕೂಡ ಕಡ್ಡಾಯವಾಗಿ ಕನ್ನಡದ ನಾಮಫಲಕಗಳನ್ನು ಅಳವಡಿಸಲು ಕೋರಲಾಯಿತು. ಇದಕ್ಕೆ ಜಿಲ್ಲಾಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿ ತಕ್ಷಣ ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ನಂತರ ಕಾಸರಗೋಡು ಬದಿಯಡ್ಕದಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಭವನ ನಿರ್ಮಾಣದ ಅಂತಿಮ ಕಟ್ಟಡದ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಸರಗೋಡು ಶಾಸಕ ಎನ್. ಎ. ನೆಲ್ಲಿಕುನ್ನು, ಬದಿಯಡ್ಕದ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಮಾಹಿಲ್‌ ಕೆಲೋಟ್‌ ಇದ್ದರು.

ಎಣ್ಮಕಜೆ ಪಂಚಾಯ್ತಿಯ ಶಾರದಾಂಬ ಕನ್ನಡ ಮಾಧ್ಯಮ ಶಾಲೆಗೆ ಭೇಟಿ ನೀಡಿ ಕಾಮಗಾರಿ ಪರಿವೀಕ್ಷಣೆ ಮಾಡಲಾಯಿತು. ನಂತರದಲ್ಲಿ ಬದಿಯಡ್ಕ ಗ್ರಾಮ ಪಂಚಾಯತಿಯಲ್ಲಿ ಗಡಿ ಕನ್ನಡಿಗರ ಸಮಸ್ಯೆಗಳ ಸಭೆ ನಡೆಸಲಾಯಿತು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ