ಕನ್ನಡಪ್ರಭ ವಾರ್ತೆ ಮಂಗಳೂರು
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತರು ಎನ್. ಸಂತೋಷ್ ಹೆಗ್ಡೆ ಅವರಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು.ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವರಾದ ಎಸ್. ಆರ್.ಪಾಟೀಲ್, ಮಾಜಿ ಸಚಿವೆ ಉಮಾಶ್ರೀ, ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಇಸ್ರೊ ಸಂಸ್ಥೆಯ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ , ಬೆಂಗಳೂರು ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ಪ್ರಕಾಶ್ ತಾಂವಶಿ , ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಜ್ಯೋತಿ ಪಾಟೀಲ್, ಬಸವ ಪರಿಷತ್ ಇದರ ಗೌರವ ಅಧ್ಯಕ್ಷರಾದ ಎಂ.ಪಿ. ಉಮಾದೇವಿ, ಅಧ್ಯಕ್ಷೆ ರೇಖಾ ಮಹಾಂತೇಶ ಹಿರೇಮಠ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಎಸ್.ಹಿರೇಮಠ ಮತ್ತಿತರರಿದ್ದರು. --------------
ನಾಲ್ಕು ದಶಕಗಳ ನಿಸ್ವಾರ್ಥ ಸೇವೆಗೆ ಸಂದ ಗೌರವಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಯನ್ನು ನೀಡಲಾಗಿದೆ. ಇವರು ಸಹಕಾರ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಗೂ ಹೆಚ್ಚು ಕಾಲ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿ ಸಹಕಾರಿ ನಾಯಕರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಇವರು ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ ಈ ಬ್ಯಾಂಕನ್ನು ರಾಜ್ಯದಲ್ಲಿ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಗಿ ರೂಪಿಸಿದ್ದಾರೆ. ಮಾತ್ರವಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆಯನ್ನು ನೀಡಿ ನವೋದಯ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಕ್ರಾಂತಿಯನ್ನು ಸೃಷ್ಟಿಸಿದ ಹೆಗ್ಗಳಿಕೆ ಇವರದ್ದು.