ಎಸ್‌ಸಿಡಿಸಿಸಿ ಬ್ಯಾಂಕ್ ನೌಕರರಿಂದ ಡಾ.ಎಂ.ಎನ್. ಆರ್‌ ಅಭಿನಂದನೆ

KannadaprabhaNewsNetwork |  
Published : Dec 05, 2025, 02:30 AM IST
ಎಸ್‌ಸಿಡಿಸಿಸಿ ಬ್ಯಾಂಕ್‌ ನೌಕರರಿಗೆ ಡಾ.ಎಂ.ಎನ್‌.ಎಂ.ಆರ್‌.ಗೆ ಅಭಿನಂದನೆ | Kannada Prabha

ಸಾರಾಂಶ

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಇತ್ತೀಚೆಗೆ ಬಹರೈನ್ ಹಾಗೂ ಬೆಂಗಳೂರುನಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕಿಗೆ ಆಗಮಿಸಿದಾಗ ಅವರನ್ನು ಬ್ಯಾಂಕ್ ನೌಕರರು ಗೌರವಪೂರ್ವಕವಾಗಿ ಅಭಿನಂದಿಸಿದರು.

ಮಂಗಳೂರು: ಕರಾವಳಿ ಕರ್ನಾಟಕದ ಸಾಮಾಜಿಕ - ಆರ್ಥಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಇತ್ತೀಚೆಗೆ ಬಹರೈನ್ ಹಾಗೂ ಬೆಂಗಳೂರುನಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಿ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕಿಗೆ ಆಗಮಿಸಿದಾಗ ಅವರನ್ನು ಬ್ಯಾಂಕ್ ನೌಕರರು ಗೌರವಪೂರ್ವಕವಾಗಿ ಅಭಿನಂದಿಸಿದರು.ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಮೊದಲ ಬಾರಿ ನೀಡಿದ ಪ್ರತಿಷ್ಠಿತ ‘ಸಹಕಾರಿ ಸಾರ್ವಭೌಮ’ ಪ್ರಶಸ್ತಿಯನ್ನು ಬಹರೈನ್‌ನಲ್ಲಿ ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾದ ಪ್ರತಿಷ್ಠಿತ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ’ ಯನ್ನು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಪ್ರದಾನ ಮಾಡಲಾಗಿತ್ತು.

ಅಭಿಮಾನ ಪೂರ್ವಕ ಗೌರವ : ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಈ ಎರಡು ಪ್ರತಿಷ್ಠಿತ ಪ್ರಶಸ್ತಿಗಳು ಸಹಕಾರಿ ರಂಗದ ಜನಪರ ಸೇವೆಗಳಿಗೆ ಒಲಿದು ಬಂದಿದೆ. ಎಸ್‌ಸಿಡಿಸಿಸಿ ಬ್ಯಾಂಕ್‌ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಕುಟುಂಬಗಳ ಆರ್ಥಿಕ ಶಕ್ತಿಯಾಗಿದ್ದ ಇವರು ಎಸ್‌ಸಿಡಿಸಿಸಿ ಬ್ಯಾಂಕ್‌ನ್ನು ಕಳೆದ 31 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸಿ ಈ ಬ್ಯಾಂಕ್‌ನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳ ಸ್ಥಾನಮಾನಕ್ಕೇರಿಸಿದ್ದಾರೆ. ಇವರ ವಿಶಿಷ್ಟ ಕಾರ್ಯ ವೈಖರಿಯಿಂದ ಎಸ್‌ಸಿಡಿಸಿಸಿ ಬ್ಯಾಂಕ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳೊಂದಿಗೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಹಾಗಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ದೊರೆತ ಈ ಎರಡು ಪ್ರಶಸ್ತಿಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ನೌಕರರು ಸಂತೋಷದಿಂದ ತಮ್ಮ ಅಧ್ಯಕ್ಷರನ್ನು ಅಭಿಮಾನ ಪೂರ್ವಕವಾಗಿ ಅಭಿನಂದಿಸಿದರು.ವಿವಿಧ ವಿಭಾಗಗಳ ಮೂಲಕ ಅಭಿನಂದನೆ :ಎಸ್‌ಸಿಡಿಸಿಸಿ ಬ್ಯಾಂಕಿನ ವಸೂಲಾತಿ ವಿಭಾಗದ ಉಪ ಮಹಾಪ್ರಬಂಧಕರಾದ ನಿತ್ಯಾನಂದ ಶೇರಿಗಾರ್, ಲೆಕ್ಕಪತ್ರ ವಿಭಾಗದ ಉಪ ಮಹಾಪ್ರಬಂಧಕ ಶರ್ಮಿಳಾ ಎಸ್. ಭಟ್ , ಯೋಜನೆ, ಶಾಖೆ ನಿಯಂತ್ರಣ ವಿಭಾಗದ ಉಪ ಮಹಾಪ್ರಬಂಧಕ ವಿದ್ಯಾ ಕಾರ್ನಾಡ್ , ಸಹಾಯಕ ಮಹಾಪ್ರಬಂಧಕ ರಾಜೇಶ್ ಶೆಟ್ಟಿ, ಕೊಡಿಯಾಲ್ ಬೈಲ್ ಶಾಖೆಯ ಉಪ ಮಹಾಪ್ರಬಂಧಕ ಜ್ಯೋತಿ ಬಾಳಿಗ, ಆಡಳಿತ ವಿಭಾಗದ ಸಹಾಯಕ ಮಹಾಪ್ರಬಂಧಕ ಸಹನಾ ಬಿ. ಶೆಟ್ಟಿ, ಸಾಲ ವಿಭಾಗದ ಸಹಾಯಕ ಮಹಾಪ್ರಬಂಧಕರಾದ ಹೇಮಲತಾ ಕೆ., ಸುಜಾತ ಭಟ್, ಕಂಪ್ಯೂಟರ್ ವಿಭಾಗದ ವ್ಯವಸ್ಥಾಪಕ ಸುನಿಲ್ ಕುಮಾರ್ ಸೇರಿದಂತೆ ವಿಭಾಗದ ಎಲ್ಲ ಸಿಬ್ಬಂದಿಗಳು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದರು. ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಹಾಗೂ ಸಿಬ್ಬಂದಿಗಳು ಅಭಿನಂದಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ.ವಾದಿರಾಜ ಶೆಟ್ಟಿ , ಎಸ್.ಎನ್.ಮನ್ಮಥ , ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್. ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿಗೆ ಮರುಜೀವ
ಪ್ರತಿಭಾ ಕಾರಂಜಿ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸೋಮಯ್ಯ