ಡಾ.ಎಂ.ಎನ್. ರಾಜೇಂದ್ರ ಕುಮಾರ್‌ಗೆ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿ

KannadaprabhaNewsNetwork |  
Published : Jun 11, 2025, 11:52 AM ISTUpdated : Jun 11, 2025, 11:53 AM IST
ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ | Kannada Prabha

ಸಾರಾಂಶ

ಫ್ರೆಂಡ್‌ಶಿಪ್ ಫೋರಂ ನವದೆಹಲಿ ನೀಡುವ ಪ್ರತಿಷ್ಠಿತ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಫ್ರೆಂಡ್‌ಶಿಪ್ ಫೋರಂ ನವದೆಹಲಿ ನೀಡುವ ಪ್ರತಿಷ್ಠಿತ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಈ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ನವದೆಹಲಿಯ ಫ್ರೆಂಡ್‌ಶಿಪ್ ಫೋರಂ ಸಂಸ್ಥೆ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 31 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ. ಇವರ ಜನಸ್ಪಂದನೆಯ ಕಾರ್ಯ ವೈಖರಿಯಿಂದಲೇ ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿದೆ.

ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿರುವ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು. ಮುಖ್ಯವಾಗಿ ಮಹಿಳಾ ಸಬಲೀಕರಣಕ್ಕೆ ನವೋದಯ ಸ್ವಸಹಾಯ ಸಂಘಗಳ ಮೂಲಕ ಹೆಚ್ಚಿನ ಪ್ರಾಶಸ್ತ್ಯ ನೀಡಿ, ಆರ್ಥಿಕ ಚೈತನ್ಯ ತುಂಬಿದ್ದಾರೆ. ಇತ್ತೀಚೆಗೆ ನಡೆದ ನವೋದಯ ರಜತ ಸಂಭ್ರಮ ಸಹಕಾರ ಕ್ರೇತ್ರದಲ್ಲೇ ನೂತನ ಮೈಲಿಗಲ್ಲನ್ನು ಸ್ಥಾಪಿಸಿದೆ.

ರಾಜೇಂದ್ರ ಕುಮಾರ್ ಅವರು ಸಹಕಾರಿ, ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಹಲವಾರು ರಾಷ್ಟ್ರೀಯ - ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಮುಖ್ಯವಾಗಿ ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ರಾಜ್ಯದ ಮೊದಲ ಸಹಕಾರಿ ನಾಯಕ ಇವರು. ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ ಸೇರಿದಂತೆ ಸಹಕಾರ ವಿಶ್ವ ಬಂಧುಶ್ರೀ, ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ, ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ, ಬೆಸ್ಟ್ ಚೇರ್ ಮೆನ್ ನ್ಯಾಷನಲ್ ಎವಾರ್ಡ್, ನ್ಯಾಷನಲ್ ಎಕ್ಸಲೆನ್ಸ್ ಎವಾರ್ಡ್, ಔಟ್ ಸ್ಟ್ಯಾಂಡಿಂಗ್ ಗ್ಲೋಬಲ್ ಲೀಡರ್‌ಶಿಪ್ ಎವಾರ್ಡ್ ಇವರ ಕಾರ್ಯದಕ್ಷತೆಗೆ ಲಭಿಸಿದೆ.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ