ಮಂಗಳೂರಲ್ಲಿ ಶೀಘ್ರ ರಾಜ್ಯ ರಣಜಿ ಪಂದ್ಯ: ಜಾವಗಲ್‌ ಶ್ರೀನಾಥ್

KannadaprabhaNewsNetwork |  
Published : Jan 06, 2026, 03:15 AM IST
ಜಾವಗಲ್‌ ಶ್ರೀನಾಥ್‌ ಅವರನ್ನು ಸನ್ಮಾನಿಸಿದ ಕ್ಷಣ. | Kannada Prabha

ಸಾರಾಂಶ

ಅಡ್ಯಾರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಡಾ.ಎಂ.ವಿ. ಶೆಟ್ಟಿ ಮತ್ತು ಡಾ. ಚೌಡಯ್ಯ ಸ್ಮಾರಕ ವಾರ್ಷಿಕ ಐಎಂಎ- ಎಎಂಸಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಭಾನುವಾರ ನೆರವೇರಿತು.

ಡಾ.ಎಂ.ವಿ. ಶೆಟ್ಟಿ, ಡಾ. ಚೌಡಯ್ಯ ಸ್ಮಾರಕ ವಾರ್ಷಿಕ ಐಎಂಎ- ಎಎಂಸಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಮಂಗಳೂರು: ವೈದ್ಯಕೀಯ ಸೇವಾ ವೃತ್ತಿಯು ಶ್ರೇಷ್ಠ ಮತ್ತು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರ ನಿಸ್ವಾರ್ಥ ಮತ್ತು ಪ್ರಾಮಾಣಿಕ ಸೇವೆ ಅಮೂಲ್ಯವಾದದ್ದು. ಸೇವಾ ಕಾರ್ಯದ ಒತ್ತಡವಿದ್ದರೂ ಸಮಯ ಹೊಂದಾಣಿಕೆ ಮಾಡಿಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಉಲ್ಲಾಸದಿಂದ ಭಾಗವಹಿಸುವ ಕಾರ್ಯ ಪ್ರಶಂಸನೀಯ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ “ಮೈಸೂರು ಎಕ್ಸ್‌ಪ್ರೆಸ್‌” ಖ್ಯಾತಿಯ ಜಾವಗಲ್ ಶ್ರೀನಾಥ್ ಹೇಳಿದ್ದಾರೆ.ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಮತ್ತು ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಜಂಟಿ ಆಶ್ರಯದಲ್ಲಿ ಅಡ್ಯಾರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಮತ್ತು ಡಾ. ಚೌಡಯ್ಯ ಸ್ಮಾರಕ ವಾರ್ಷಿಕ ಐಎಂಎ- ಎಎಂಸಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಡಾ. ಶಾಂತಾರಾಮ್ ಶೆಟ್ಟಿ ಮತ್ತು ಡಾ. ಮಂಜುನಾಥ್ ಭಂಡಾರಿ ಅವರಿಗೆ ಚೆಂಡನ್ನು ಎಸೆದು ಸಾಂಕೇತಿಕವಾಗಿ ಉದ್ಘಾಟಿಸಿ ಅವರು ಮಾತನಾಡಿದರು.ಗೆಳೆಯರ ಮತ್ತು ಮಿತ್ರ ವೃಂದದವರೊಂದಿಗೆ ಒಡನಾಟಕ್ಕೆ ಇದೊಂದು ಉತ್ತಮ ವೇದಿಕೆ ಎಂದು ಹೇಳಿದ ಶ್ರೀನಾಥ್‌, ಆಟದ ಮೈದಾನದಲ್ಲಿ ಒದಗಿಸಿದ ಕ್ರೀಡಾ ಸೌಕರ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿ ಶ್ರೀಘದಲ್ಲಿಯೇ ಮಂಗಳೂರಿನಲ್ಲಿ ರಾಜ್ಯ ಮಟ್ಟದ ರಣಜಿ ಪಂದ್ಯಾಟವನ್ನು ಆಯೋಜಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಈ ಸಂದರ್ಭ ಅವರ ಜೀವಮಾನ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ಇತ್ತೀಚೆಗೆ ನಿಧನರಾದ ನಿಟ್ಟೆ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿನಯ್ ಹೆಗ್ಡೆಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ ಚಾನ್ಸೆಲರ್ ಡಾ. ಶಾಂತಾರಾಂ ಶೆಟ್ಟಿ, ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ. ವೀರಭದ್ರಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ತಂಡಗಳಿಗೆ ಯಶಸ್ಸು ಕೋರಿದರು. ವೇದಿಕೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ವೈದ್ಯಕೀಯ ತಜ್ಞರ ಸಂಘದ ಅಧ್ಯಕ್ಷ ಡಾ. ಆನಂದ ಬಂಗೇರ, ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ, ಕೋಶಾಧಿಕಾರಿ ಡಾ. ಜ್ಯೂಲಿಯನ್ ಸಲ್ಡಾನ್ಹಾ ಮತ್ತು 6 ಸ್ಪರ್ಧಾ ಕ್ರಿಕೆಟ್ ತಂಡಗಳ ಮಾಲೀಕರು ಇದ್ದರು.ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಸ್ವಾಗತಿಸಿದರು. ವೈದ್ಯಕೀಯ ತಜ್ಞರ ಸಂಘದ ಕಾರ್ಯದರ್ಶಿ ಡಾ. ಉಲ್ಲಾಸ್ ಶೆಟ್ಟಿ ವಂದಿಸಿದರು. ಡಾ. ಮಧುರಾ ಭಟ್ ನಿರೂಪಿಸಿದರು.ಸಚ್ಚಿ ಸ್ಟ್ರೈಕರ್ಸ್‌ ಪ್ರಥಮ: ಅಂತಿಮ ಕ್ರಿಕೆಟ್ ಪಂದ್ಯಾಟದಲ್ಲಿ ಡಾ. ಸಚ್ಚಿದಾನಂದ ರೈ ಮಾಲೀಕತ್ವದ “ಸಚ್ಚಿ ಸ್ಟ್ರೈಕರ್ಸ್” ತಂಡವು ಪ್ರಥಮ ಸ್ಥಾನ ಗಳಿಸಿ ಆಕರ್ಷಕ ಪ್ರಶಸ್ತಿ ಮತ್ತು ನಗದು ಬಹುಮಾನ 1 ಲಕ್ಷ ರು. ಪಡೆಯಿತು. ದ್ವಿತೀಯ ಸ್ಥಾನವನ್ನು ಡಾ. ವಿಕ್ರಮ್ ಶೆಟ್ಟಿ ಮಾಲೀಕತ್ವದ “ವಿಕ್ಕಿ ವೀಕಿಂಗ್ಸ್” ತಂಡ ಪಡೆದು ಪ್ರಶಸ್ತಿ ಮತ್ತು 50 ಸಾವಿರ ರು. ಪಡೆಯಿತು.

ಡಾ. ವಿನೋದ್ ನಾಯಕ್- ಪಂದ್ಯ ಪುರುಷೋತ್ತಮ, ಸರಣಿ ಶ್ರೇಷ್ಠ, ಡಾ. ನವನೀತ್- ಅತ್ಯುತ್ತಮ ಸವ್ಯಸಾಚಿ, ಡಾ. ಅಭಯ್- ಶ್ರೇಷ್ಠ ಕ್ಷೇತ್ರ ರಕ್ಷಕ, ಡಾ. ಮಂಜುನಾಥ್ - ಶ್ರೇಷ್ಠ ಬೌಲರ್, ಡಾ. ಪವನ್ ವಿನಯ್- ಶ್ರೇಷ್ಠ ದಾಂಡಿಗ ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾದರು. ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಮತ್ತು ವೈದ್ಯಕೀಯ ತಜ್ಞರ ಸಂಘದ ಅಧ್ಯಕ್ಷ ಡಾ. ಆನಂದ ಬಂಗೇರ ಪ್ರಶಸ್ತಿ ಪ್ರದಾನ ಮಾಡಿ ವೈಯಕ್ತಿಕ ಪದಕ ಮತ್ತು ಬಹುಮಾನಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ