ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ. ಮಹಾಂತ ಶ್ರೀ

KannadaprabhaNewsNetwork |  
Published : Aug 04, 2026, 02:15 AM IST
4654 | Kannada Prabha

ಸಾರಾಂಶ

ಯುವ ಪೀಳಿಗೆಯಲ್ಲಿ ಬೆಳೆಯುತ್ತಿರುವ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಸೂಕ್ತ ಮಾರ್ಗದರ್ಶನ ಅಗತ್ಯವಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾವಿರಾರು ಜನರನ್ನು ವ್ಯಸನ ಮುಕ್ತರನ್ನಾಗಿ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ವಿಶೇಷ ಪಾತ್ರ ವಹಿಸುತ್ತಿದ್ದಾರೆ.

ಧಾರವಾಡ:

ಡಾ. ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜಕ್ಕಾಗಿ ಮನೆಯಿಂದ-ಮನೆಗೆ ತೆರಳಿ ಜನರಲ್ಲಿ ವ್ಯಸನದ ದುಷ್ಪರಿಣಾಮ ತಿಳಿಸಿ ಜಾಗೃತಿ ಮೂಡಿಸುತ್ತ ಜೋಳಿಗೆ ಹಿಡಿದು ಜನರ ದುಶ್ಚಟಗಳನ್ನು ಜೋಳಿಗೆಯಲ್ಲಿ ಹಾಕಿ ಎಂದು ಭಿಕ್ಷೆ ಕೇಳಿದರು. ಆ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಜನತಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಹೇಳಿದರು.

ಇಲ್ಲಿನ ಜೆಎಸ್‌ಎಸ್ ಶ್ರೀಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಮಾನವ ಹಕ್ಕುಗಳ ಸಂಘ ಮತ್ತು ಎನ್.ಎಸ್. ಘಟಕದ ವತಿಯಿಂದ ಹಮ್ಮಿಕೊಂಡ ವ್ಯಸನ ಮುಕ್ತ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಪೀಳಿಗೆಯಲ್ಲಿ ಬೆಳೆಯುತ್ತಿರುವ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಸೂಕ್ತ ಮಾರ್ಗದರ್ಶನ ಅಗತ್ಯವಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾವಿರಾರು ಜನರನ್ನು ವ್ಯಸನ ಮುಕ್ತರನ್ನಾಗಿ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ವಿಶೇಷ ಪಾತ್ರ ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಹ ದುಶ್ಚಟಗಳಿಂದ ದೂರವಿರಲು ಪ್ರತಿಜ್ಞೆ ಮಾಡಿ ಆದರ್ಶಮಯ ಬದುಕು ಕಟ್ಟಿಕೊಳ್ಳಬೇಕೆಂದು ಕರೆ ನೀಡಿದರು.

ಪ್ರೊ. ಎಸ್.ಕೆ. ಸಜ್ಜನ ಮಾತನಾಡಿ, ಡಾ. ಮಹಾಂತ ಸ್ವಾಮಿಗಳ ಜೋಳಿಗೆ ಅಭಿಯಾನದಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ. ಅವರ ಶ್ರಮ, ಪ್ರಯತ್ನ, ಛಲದಿಂದ ಯುವ ಪೀಳಿಗೆಯಲ್ಲಿ ದೇಶ ಮತ್ತು ವಿದೇಶಾದ್ಯಂತ ದುಶ್ಚಟಗಳ ದುಷ್ಪರಿಣಾಮ ಕುರಿತು ತಿಳಿವಳಿಕೆ ನೀಡಿದರು.

ಇಂದು ದೇಶದ ಶೇ. ೩೦ರಷ್ಟು ಯುವಜನತೆ ದುಶ್ಚಟಗಳಿಗೆ ಬಲಿಯಾಗಿರುವುದು ಅತ್ಯಂತ ನೋವಿನ ಸಂಗತಿ ಎಂದ ಅವರು, ಧರ್ಮಸ್ಥಳದಲ್ಲಿ ಜನರನ್ನು ವ್ಯಸನ ಮುಕ್ತಗೊಳಿಸಲು ಆಸ್ಪತ್ರೆ ನಿರ್ಮಿಸಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಅವರಿಗೆ ಅನ್ನ ಪ್ರಶಸ್ತಿ ನೀಡಿ ಅವರನ್ನು ಆರೋಗ್ಯವಂತರಾಗಿ ಮಾಡಿ ಸಮಾಜಕ್ಕೆ ಧರ್ಮಾಧಿಕಾರಿಗಳು ನೀಡುತ್ತಿದ್ದಾರೆ. ಇಂತಹ ವ್ಯಕ್ತಿಗಳಿಂದ ಪ್ರೇರಿತವಾಗಿ ವಿದ್ಯಾರ್ಥಿಗಳು ಸಹ ದುಶ್ಚಟಗಳಿಂದ ದೂರ ಇದ್ದು ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕೆಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಅರಿಹಂತ ಪ್ರಸಾದ ಮಾತನಾಡಿ, ಸಿನಿಮಾ, ಧಾರಾವಾಹಿ, ವೆಬ್ ಸಿರೀಸ್ ಮುಂತಾದ ಮಾಧ್ಯಮಗಳಿಂದ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮೊಬೈಲ್ ದುಷ್ಪರಿಣಾಮಗಳ ಬಗ್ಗೆ ಕತೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು.

ಉಪಪ್ರಾಚಾರ್ಯ ಡಾ. ಸೂರಜ್‌ ಜೈನ್, ಮಹಾವೀರ ಉಪಾಧ್ಯೆ, ಡಾ. ಆರ್.ವಿ. ಚಿಟಗುಪ್ಪಿ, ಶ್ರುತಿ ಶೆಟ್ಟಿ, ಪ್ರೊ. ಬಲಭೀಮ ಹಾವನೂರ, ಗೀತಾ ದೇಸಾಯಿ, ಪ್ರೊ. ಮಹಾಂತ ಎಂ. ದೇಸಾಯಿ, ಪ್ರೊ. ಬಲಭೀಮ ಹಾವನೂರ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತರಿಗೆ ಜನಪರ ಕಾಳಜಿ ಅಗತ್ಯ: ದೇಸಾಯಿ
ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಶಿಕ್ಷೆ ಖಚಿತ: ಸುಮತಿ